Published
12 months agoon
By
Akkare Newsಕಡಬ: ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ ಸಂದರ್ಭ ಕಳ್ಳರು ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ. ನಗದನ್ನು ಕಳವುಗೈದ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲದಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯ ಬೀಗ ಮುರಿದ ಕಳ್ಳರು, ನಗದನ್ನು ದೋಚಿದ್ದಾರೆ. ಪಕ್ಕದಲ್ಲಿರುವ ಮನೆಯೊಂದರ ಬೀಗ ಮುರಿಯುವ ವೇಳೆ ಆಟೋ ರಿಕ್ಷಾ ಆಗಮಿಸುವುದನ್ನು ನೋಡಿದ ಕಳ್ಳರು ಪರಾರಿಯಾಗಿರುವುದಾಗಿ ತಿಳಿದುಬಂದಿದೆ.ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.