Published
12 months agoon
By
Akkare Newsಸುಬ್ರಹ್ಮಣ್ಯ: ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಓರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಬಳ್ಳದ ಪಾದೆ ಎಂಬಲ್ಲಿ ಶುಕ್ರವಾರ ನಡೆದಿದೆ.
ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ರಘು ಎಸ್.ಆರ್. (32) ಮೃತಪಟ್ಟವರು.ಬಳ್ಳದಲ್ಲಿ ಪವರ್‌ಮ್ಯಾನ್ ಆಗಿದ್ದ ರಘು ಎಸ್.ಆರ್. ಬಳ್ಳದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.