Published
12 months agoon
By
Akkare Newsಪುತ್ತೂರು : ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೋರ್ವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಜ 6 ರಂದು ನಡೆದಿದೆ.ಮೃತರಾದ ಮಹಿಳೆ ಬಲ್ನಾಡು ನಿವಾಸಿ ಕೇಸರಿ (41) ಎನ್ನಲಾಗಿದ್ದು, ಜ5 ರಂದು ಮಧ್ಯಾಹ್ನ ಆತ್ಮಹತ್ಯೆಗೆ ಯತ್ನಿಸಿ ಚಿಂತಜನಕ ಸ್ಥಿತಿಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ನಂತರ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕೇಸರಿಯವರ ಮನೆಯ ದಾಖಲೆಯನ್ನು ಇಟ್ಟು ಖಾಸಗಿ ಲೇವಾದೇವಿದಾರರಿಂದ ಮೀಟರ್ ಬಡ್ಡಿಗೆ ಹಣ ಪಡೆದಿದ್ದರು. ಮೀಟರ್ ಬಡ್ಡಿ ಕೊಟ್ಟಿದ್ದವರು ತೊಂದರೆ ಕೊಡುತಿದ್ದಾರೆ ಎಂದು ಆತ್ಮಹತ್ಯೆಗೆ ಯತ್ನಕ್ಕೂ ಮೊದಲು ಹಲವರಲ್ಲಿ ಕಣ್ಣೀರಿಟ್ಟು ಹೇಳಿಕೊಂಡಿದ್ದರು ಎನ್ನಲಾಗಿದೆ.ಸಾಲದೆ ಬಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ಪತಿ, ಇಬ್ಬರು ಸಣ್ಣ ಮಕ್ಕಳನ್ನು ಅಗಲಿದ್ದಾರೆ.ತುಮಕೂರು ಜಿಲ್ಲೆಯ ಐದು ಜನರ ಕುಟುಂಬವೊಂದು ಮೀಟರ್ ಬಡ್ಡಿ ಸುಲಿಗೆ ಸಿಲುಕಿ ಸಾಮೂಹಿಕ ಆತ್ಮಹತ್ಯೆ ನಡೆಸಿತ್ತು. ಈ ವೇಳೆ ಗೃಹ ಸಚಿವ ಜಿ. ಪರಮೇಶ್ವರ್ ರವರು ಮೀಟರ್ ಬಡ್ಡಿ ದಂಧೆಕೋರರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. ಆದಾದ ಬಳಿಕವು ಈ ಪ್ರಕರಣ ನಡೆದಿರುವುದು ಜಿಲ್ಲಾಡಳಿತದ ವೈಫಲ್ಯಕ್ಕೆ ಸಾಕ್ಷಿಯಾಗಿದೆ.ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಹಾಗೂ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.