Published
2 years agoon
By
Akkare News
ಬೆಂಗಳೂರು : ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ.ಅಂದು ಶ್ರೀ ರಾಮನ ವಿಗ್ರಹ ಪ್ರತಿಷ್ಟಾಪನೆ ಆಗಲಿದ್ದು ಅದೇ ಸಮಯದಲ್ಲಿ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಜನವರಿ 22 ರಂದು ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್ ನಿಂದ 12 ಗಂಟೆ 32 ನಿಮಿಷಗಳವರೆಗೆ ಮಹಾಮಂಗಳಾರತಿ ಹಾಗೂ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದರು.ಆ ಸಮಯದಲ್ಲಿ ಶ್ರೀ ರಾಮ ವಿಗ್ರಹ ಪ್ರತಿಷ್ಟಾಪನೆ ನಡೆಯಲಿದೆ.