ಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿPublished
12 months agoon
By
Akkare Newsಕಟೀಲು ಶ್ರೀ ದುರ್ಗಾಪರಮೇಶ್ವರಿ ಜ.14 ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ಆರೂ ಮೇಳಗಳ ಯಕ್ಷಗಾನ ಇಡೀ ರಾತ್ರಿ ಪ್ರದರ್ಶನ ಕಾಣಲಿದೆ.ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಉಚ್ಛ ನ್ಯಾಯಾಲಯದ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರ ಅಪೇಕ್ಷೆ ಮೇರೆಗೆ ಜ.14 ರ ಮಕರ ಸಂಕ್ರಮಣದಿಂದ ಬೆಳಗ್ಗಿನವರೆಗೆ ಯಕ್ಷಗಾನ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ಅನುವಂಶಿಕ ಮುಕ್ತೇಸರ ಕೊಡೆತ್ತೂರುಗುತ್ತು ಸನತ್ ಕುಮಾರ್ ಶೆಟ್ಟಿ ಹಾಗೂ ಅನುವಂಶಿಕ ಮೊಕ್ತೇಸರ ವಾಸುದೇವ ಅಸ್ರಣ್ಣ ತಿಳಿಸಿದ್ದಾರೆ.
ಬೆಂಗಳೂರಿನ ಕೃಷ್ಣಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭ ಹೈಕೋರ್ಟ್, ಪೂರ್ಣರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ತೊಂದರೆ ಇಲ್ಲ, ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದಿತ್ತು. ಶಬ್ದಮಾಲಿನ್ಯ ಉಂಟಾಗಲಾರದು, ಧ್ವನಿವರ್ಧಕ ಬಳಕೆಯಿಂದ ಹಳ್ಳಿಗಳಲ್ಲಿ ಯಾವುದೇ ಸಮಸ್ಯೆ ಇಲ್ಲ. ನಗರದಲ್ಲಿ ಶಬ್ದಮಿತಿಯನ್ನು ನೋಡಿಕೊಳ್ಳಲಾಗುವುದು. ಇದು ಹರಕೆಯ ಆಟ. ಹಾಗಾಗಿ ಜನರಿಗೆ ಯಾವುದೇ ಸಮಸ್ಯೆ ಆಗಲಾರದು ಎಂದು ಸನತ್‌ಕುಮಾರ್ ಶೆಟ್ಟಿ ಮಾಧ್ಯಮವೊಂದಕ್ಕೆ ತಿಳಿಸಿರುವುದಾಗಿ ವರದಿಯಾಗಿದೆ.