ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ರಾಮರಾಜ್ಯದ ಕನಸು ಕಂಡ ಮಹಾತ್ಮ ಗಾಂಧಿ: ರಾಮ ಮಂದಿರಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯ ಪಟ್ಟಿ ಬಿಡುಗಡೆ

Published

on

ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ (Ram Mandir)ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು ಎಂದು ಕಾಂಗ್ರೆಸ್ ಬಿಜೆಪಿಗೆ ಟಾಂಗ್ ನೀಡಿದೆ. ಈ ನಡುವೆ, ಕಾಂಗ್ರೆಸ್ ರಾಮ ಮಂದಿರಕ್ಕೆ ನೀಡಿದ ಕೊಡುಗೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಬಿಡುಗಡೆ ಮಾಡಿದ ಪಟ್ಟಿ ಹೀಗಿದೆ:
*ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ.
* ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು.
* ನಾಥುರಾಮ್ ಗೂಡ್ಲೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ.
* 1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ.
* 1989 ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್ ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ.
* ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ಣುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ.
* ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ ರಾಮನ ಹೆಸರೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ ಬಿಜಪಿಗೆ ಸನ್ಮತಿ ದೇ ಭಗವಾನ್” ಎಂದು ಹೇಳಬೇಕಾಗಿ ಬಂದಿರುವುದು ದುರಂತ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version