ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ
ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ ಇಂದಿನಿಂದ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಅಭಿಯಾನ : ಇಂದಿನಿಂದ ಬೆಂಗಳೂರಿನ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿ.Published
12 months agoon
By
Akkare Newsಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ ಇಂದಿನಿಂದ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಅಭಿಯಾನ ನಡೆಸಲಿದೆ. ಇಂದಿನಿಂದ ಬೆಂಗಳೂರಿನ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗುತ್ತಿದೆ.ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ದರ್ಶನಕ್ಕೆ ಅವಕಾಶವಿರದು. ಕರ್ನಾಟಕ ದೇವಸ್ಥಾನ ಮಹಾಸಂಘ ದೇಗುಲಗಳ ಮುಂದೆ ಬೋರ್ಡ್ ಹಾಕಲಿದೆ.
(ಜ.10) ಅಂದರೆ ಇಂದು ಮಧ್ಯಾಹ್ನ 12 ಗಂಟೆಗೆ ವಸಂತನಗರದ ಶ್ರೀಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ದೊರೆಯಲಿದ್ದು, ಹೀಗಾಗಿ, ಇನ್ನೂ ಮುಂದೆ ದೇಗುಲಗಳಿಗೆ ಅರೆಬರೆ ಬಟ್ಟೆ ಧರಿಸಿ ಬಂದರೆ ಪ್ರವೇಶ ನಿರಾಕರಿಸಲಾಗುತ್ತದೆ.ದಕ್ಷಿಣ ಕನ್ನಡ-ಉಡುಪಿಯ ಕೆಲವು ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಲ್ಲಿದ್ದು, ಪುರುಷರು ಅಂಗಿ ಧರಿಸಿ ದೇವಾಲಯದೊಳಗೆ ಹೋಗುವಂತಿಲ್ಲ.
ಇನ್ನು ಮುಂದೆ ಬೆಂಗಳೂರು ದೇವಾಲಯಗಳಲ್ಲಿ ವಸ್ತ್ರಸಂಹಿತೆ ಇಂದಿನಿಂದ ಜಾರಿಗೆ ಬರಲಿದೆ. ವಸ್ತ್ರ ಸಂಹಿತೆ ಅನುಸಾರ, ಪುರುಷರು ದೇವಾಲಯಕ್ಕೆ ಚಡ್ಡಿ, ಬರ್ಮುಡಾ, ಹರಿದ ಜೀನ್ಸ್, ಎದೆ ಕಾಣುವ ಟಿಶರ್ಟ್ ಧರಿಸಿಕೊಂಡು ಬರುವಂತಿಲ್ಲ. ಮಹಿಳೆಯರು ಸ್ಕರ್ಟ್, ಮಿಡಿ, ಹರಿದ ಜೀನ್ಸ್, ಶಾರ್ಟ್ಸ್ ಹಾಕಿಕೊಂಡು ಬರುವಂತಿಲ್ಲ. ಒಂದು ವೇಳೆ ಹೀಗೆ ಬಂದರೆ ದೇವಸ್ಥಾನದ ಒಳಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.