Published
1 year agoon
By
Akkare Newsಚಿತ್ರದುರ್ಗ: ಬೆಂಗಳೂರು ಸ್ಟಾರ್ಟ್ ಅಪ್ ಸಿಇಒ ಸುಚನಾ ಸೇರ್ ಪ್ರಕರಣ ಒಂದೊಂದೇ ಸತ್ಯಾಂಶ ಹೊರಬೀಳುತ್ತಿದೆ. ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಹತ್ಯೆಯ ಭೀಕರತೆಯನ್ನು ವೈದ್ಯಾಧಿಕಾರಿ ಹೇಳಿದ್ದಾರೆ.ಮೃತ ಮಗುವಿನ ಮರಣೋತ್ತರ ಪರೀಕ್ಷೆಯನ್ನು, ಹಿರಿಯೂರು ತಾಲೂಕು ಆಸ್ಪತ್ರೆ ಶವಾಗಾರದಲ್ಲಿ ವೈದ್ಯಾಧಿಕಾರಿ ಡಾ.ಕುಮಾರ ನಾಯ್ಕ ಡಾ.ರಂಗೇಗೌಡ ನಡೆಸಿದ್ದಾರೆ.
ಬಳಿಕ ಮಾತನಾಡಿದ ಕುಮಾರ ನಾಯ್ಕ, 36 ಗಂಟೆಗಳ ಹಿಂದೆಯೇ ಮಗುವಿನ ಹತ್ಯೆಯಾಗಿದೆ. ಕೈಯಿಂದ ಕತ್ತು ಹಿಸುಕಿ ಹತ್ಯೆ ಮಾಡಿಲ್ಲ. ತಲೆ ದಿಂಬು ಅಥವಾ ಬೇರೆ ವಸ್ತು ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಉಸಿರುಗಟ್ಟಿಸಿದ ಕಾರಣ ಮಗುವಿನ ಮುಖ, ಎದೆಭಾಗ ಊದಿಕೊಂಡಿದೆ. ಹೀಗಾಗಿ ಮಗುವಿನ ಮೂಗಿನಿಂದ ರಕ್ತಸ್ರಾವವಾಗಿದೆ ಎಂದು ಹೇಳಿದರು.