Published
12 months agoon
By
Akkare Newsಬುಧವಾರವೂ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ, ಬಿರುಗಾಳಿ ಬೀಸುವ ಸಾಧ್ಯತೆ, ಗುಡುಗು ಸಿಡಿಲಿನ ಎಚ್ಚರಿಕೆ! ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಹುಬ್ಬಳ್ಳಿ,ವಿಜಯಪುರ ಹಾಗೂ ಬೀದರ್ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 48 ಗಂಟೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಚಾಮರಾನಗರ, ಚಿಕ್ಕಮಗಳೂರು, ಕೊಡುಗು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಚಳಿ ಬಿಡುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.