Published
12 months agoon
By
Akkare Newsಮಂಗಳೂರು(ಬೆಂಗಳೂರು): ಜ.21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸೂಚನೆ ಮೇರೆಗೆ ದ ಕ ಜಿಲ್ಲೆಯ ಮಂಗಳೂರಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಸೇರಿದಂತೆ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಕಾರ್ಯಕರ್ತರು, ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, 2023ರ ವಿಧಾನಸಭಾ ಅಭ್ಯರ್ಥಿಗಳು, ಆಕಾಂಕ್ಷಿಗಳು, ಎಐಸಿಸಿ, ಕೆಪಿಸಿಸಿ ಸದಸ್ಯರು, ಡಿಸಿಸಿ, ಬಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ, ಸೆಲ್, ವಿಭಾಗಗಳ ಎಲ್ಲಾ ಹಂತದ ಅಧ್ಯಕ್ಷರು, ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಪರಾಜಿತ ಅಭ್ಯರ್ಥಿಗಳು, ಗ್ರಾ.ಪಂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಮಟ್ಟದಿಂದ ಬೂತ್ ಮಟ್ಟದವರೆಗೆ ಎಲ್ಲಾ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.