ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕಾನೂನು

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿ:ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಯುವಕನ ಬಂಧನ

Published

on

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.ಕಳಂಜ ನಿವಾಸಿ ರಾಜೇಶ್ ಎಂಬಾತ ಬಂಧಿತ ಯುವಕ. ಪೋಕ್ಸೋ ಆಕ್ಟ್ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಈತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.


ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಅಶೋಕ್ ಸಿಎಂ ಹಾಗೂ ಸಿಬ್ಬಂದಿಗಳಾದ ಪ್ರವೀಣ್ ಬಾರ್ಕಿ ಮತ್ತು ಸಂತೋಷ್ ಕೆಜೆ ರವರು ಆರೋಪಿಯನ್ನು ಕಳಂಜ ಗ್ರಾಮದ ಕಿಲಂಗೋಡಿ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version