ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಅಭಿಪ್ರಾಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇಅಭಿಪ್ರಾಯ ಇತ್ತೀಚಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ- ಇದಕ್ಕೆಲ್ಲ ತಿಲಾಂಜೆಲಿ ನೀಡುವ ಕೆಲಸ ಪದ್ಮರಾಜ್ ಆರ್ ಪೂಜಾರಿಯನ್ನು ಗೆಲ್ಲಿಸುವ ಮೂಲಕ ಆಗಬೇಕಿದೆ :ಜನಾರ್ದನ ಪೂಜಾರಿಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸುದ್ದಿಗೋಷ್ಠಿ ಸ್ಥಳೀಯ
ಸಮಾಜದ ಜನರ ಭಾವನೆಗಳ ಜತೆಗಿನ ಚೆಲ್ಲಾಟಕ್ಕೆ ಬಿಜೆಪಿಗೆ ತಕ್ಕ ಉತ್ತರ: ಸತ್ಯಜಿತ್ ಸುರತ್ಕಲ್ಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಜೆಡಿಎಸ್ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ, ಸುಳ್ಯ ಜೆಡಿಎಸ್ ಉಪಾಧ್ಯಕ್ಷ ಪ್ರವೀಣ್ ಮುಂಡೋಡಿ ಕಾಂಗ್ರೆಸ್ ಸೇರ್ಪಡೆ, ಸರ್ವ ಜನಾಂಗದ ಶಾಂತಿಯ ತೋಟ ನಮ್ಮ ಧ್ಯೇಯ, ಪಂಜದಲ್ಲಿ ನಡೆದ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬುದ್ದಿವಂತರ ಜಿಲ್ಲೆ ಅಭಿವೃದ್ಧಿ ಕಡೆ ಹೆಜ್ಜೆ ಹಾಕಬೇಕಾಗಿದೆ ಆಲಂಕಾರು ಕಾಂಗ್ರೆಸ್ ಬಹಿರಂಗ ಚುನಾವಣಾ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಸ್ಥಳೀಯ ಬೆಳೆಗಾರರ ನಿರ್ಲಕ್ಷಿಸಿ ಅಡಿಕೆ ಆಮದು ನೆಲ್ಯಾಡಿಯಲ್ಲಿ ನಡೆದ ಬಹಿರಂಗ ಚುನಾವಣಾ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಸೋಲಿನಿಂದ ಭಯಗೊಂಡ ಬಿಜೆಪಿ ಅಭ್ಯರ್ಥಿ, ಸೋಲು ತಪ್ಪಿಸಲು ಮೋದಿಯ ಮೊರೆ ಹೋದ ಜಿಲ್ಲಾ ಬಿಜೆಪಿ ಹಿಂದುತ್ವದ ಭದ್ರಕೋಟೆಯಲ್ಲಿ ಸೋಲಿನ ಭಯದಲ್ಲಿ ಬಿಜೆಪಿ : ಪ್ರದೀಪ್ ಬೇಲಾಡಿಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ/ ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ; ಸುಮಲತಾಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ರಾಜ್ಯದಲ್ಲಿ ಕಮಲ ಪಡೆ ಹೆಚ್ಚು ಸೀಟು ಗೆಲ್ಲುವುದು ಕಷ್ಟ ಭವಿಷ್ಯ ನುಡಿದ : ಸಾಹಿತಿ ಎಸ್ ಎಲ್ ಭೈರಪ್ಪ !!?ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುದ್ರೋಳಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಚಾಲನೆ ; ಅಭ್ಯರ್ಥಿ ಪದ್ಮರಾಜ್ ಆರ್. ಗೆಲುವಿಗೆ ಕೈಜೋಡಿಸಿದ ಕಾಂಗ್ರೆಸ್ ಮುಖಂಡರುಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸುದ್ದಿಗೋಷ್ಠಿ ಸ್ಥಳೀಯ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಪತ್ರಕರ್ತರಿಗೆ ಬೆದರಿಕೆ-ಪತ್ರಿಕೆ ಬಹಿಷ್ಕರಿಸಲು ಕರೆ;ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸುತ್ತಿರುವ ಶಾಸಕರ ವರ್ತನೆಗೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಖಂಡನೆ-ಕ್ಷಮೆಯಾಚಿಸಲು ಆಗ್ರಹಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್ಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಶಾಂತಿ ಸಾಮರಸ್ಯ ಮತ್ತು ಅಭಿವೃದ್ಧಿ ನನ್ನ ಮೂಲ ಮಂತ್ರ ನನ್ನ ಧರ್ಮವನ್ನು ಗೌರವಿಸಿ ಇನ್ನೊಂದು ಧರ್ಮವನ್ನು ದ್ವೇಷಿಸುವ ಕೆಲಸ ಮಾಡಲ್ಲ ಜಾಣ ನಡೆ ಯತ್ತ ಕಾಂಗ್ರೆಸ್ ಅಭ್ಯರ್ಥಿ: ಪದ್ಮರಾಜ್ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರ, ಪ್ರತೀಯೊಂದು ಕ್ಷೇತ್ರದಲ್ಲೂ ಶಾಸಕರ ಸೇವೆ ಅಭಿನಂದನಾರ್ಯ: ಕಾವು ಹೇಮನಾಥ ಶೆಟ್ಟಿಅಪಘಾತ ಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ ತಾಲೂಕಿನ ಕಾರೊಂದು ತುಮಕೂರಿನಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಪತ್ತೆ; ಸ್ಥಳಕ್ಕೆ ಆಗಮಿಸಿದ ಶ್ವಾನದಳ ಮತ್ತು FSL ತಂಡಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ನಾಳೆ ಮಾ 22: ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ರವರ ಪ್ರಮುಖರ ಸಭೆ ಬಿಜೆಪಿಗೆ ಮುಳುವಾಗುತಾರೋ..??? ಬೆಂಬಲಿಸುತಾರೋ...???ಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸುದ್ದಿಗೋಷ್ಠಿ ಸ್ಥಳೀಯ
ಸದಾನಂದ ಗೌಡರಿಗೆ ರಾಜ್ಯ" ಒಕ್ಕಲಿಗ ಸಂಘ" ಬೆಂಬಲ. ರಾಜ್ಯದಲ್ಲಿ ಒಕ್ಕಲಿಗರಿಗೆ ಸೀಟು ಹಂಚಿಕೆ ವಿಚಾರ. ಬಿಜೆಪಿ ವಿರುದ್ಧ ಸಿಡಿದೆದ್ದ ಸದಾನಂದ ಗೌಡರ ಮಹತ್ವದ ನಿರ್ಧಾರ ನಾಳೆ ಪ್ರಕಟ. "ಕೈ" ಹಿಡಿಯಲಿದ್ದಾರೆಯೇ ಡಿ. ವಿ.ಎಸ್. .....!!!?ಅಭಿಪ್ರಾಯ ಇತ್ತೀಚಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ
ನಾಳೆ(ಮಾ 19) ಡಿ.ವಿ.ಸದಾನಂದ ಗೌಡರ ಕುತೂಹಲದ ಪತ್ರಿಕಾ ಗೋಷ್ಠಿ : ರಾಜಕೀಯ ನಿವೃತ್ತಿ ಘೋಷಿಸುತ್ತಾರೆ...? ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆಯೋ !!!? ಎಲ್ಲರ ಚಿತ್ತ...ಗೌಡ ರತ್ತ .....!!!ಅಭಿನಂದನೆ ಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ , ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟೋ ಸೂರ್ಯPublished
12 months agoon
By
Akkare Newsರಾಮಮಂದಿರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ.
ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ. ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್.ಎಸ್.ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರಮೋದಿ ಅವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ.
ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ಪಕ್ಷ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂಬ ನಮ್ಮ ನಿಲುವಿನಂತೆ ರಾಮಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡಿದ್ದೆವು. ಇದರ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರಿಲ್ಲ. ಮುಸ್ಲಿಂ ಬಾಂಧವರು ಕೂಡಾ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಂಡು ನ್ಯಾಯಾಂಗದ ಮೇಲಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ.
ಆದರೆ ರಾಮಜನ್ಮಭೂಮಿ ವಿವಾದ ಧಾರ್ಮಿಕ ಶ್ರದ್ದೆಯ ಪ್ರಶ್ನೆ, ಅದು ನ್ಯಾಯಾಲಯದಲ್ಲಿ ತೀರ್ಮಾನ ಮಾಡುವಂತಹದ್ದಲ್ಲ ಎಂದು ಹೇಳಿಕೊಂಡು ಬಂದಿದ್ದ ಬಿಜೆಪಿ ಮತ್ತು ಆರ್.ಎಸ್.ಎಸ್, ವಿಶ್ವಹಿಂದೂ ಪರಿಷತ್ ಮೊದಲಾದ ಸಂಘಟನೆಗಳು ಸುಪ್ರೀಂ ಕೋರ್ಟ್ ತೀರ್ಪು ತಮ್ಮ ಪರವಾಗಿ ಹೊರಬಿದ್ದ ಕೂಡಲೇ ಅದನ್ನು ಒಪ್ಪಿಕೊಂಡಿರುವುದು ಈ ಸಂಘಟನೆಗಳ ನಾಯಕರ ಹಿಪಾಕ್ರಟಿಕ್ ನಡವಳಿಕೆಗೆ ಸಾಕ್ಷಿ.
ರಾಮಮಂದಿರದಲ್ಲಿ ಶೈವರು-ಶಾಕ್ತರಿಗೆ ಅಧಿಕಾರ ಇಲ್ಲ ಎಂಬ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿಯವರ ಹೇಳಿಕೆ ವಿವಾದ ಸೃಷ್ಟಿಸಿದೆ. ಇದು ನಿಜವೆಂದಾದರೆ ಇದು ಸಮಸ್ತ ಶೈವ ಆರಾಧಕರಿಗೆ ಮಾಡಿರುವ ಅವಮಾನವಾಗಿದೆ. ಇದೇ ರೀತಿ ರಾಮಮಂದಿರವನ್ನು ರಾಜಕೀಯಕ್ಕಾಗಿ ದುರುಪಯೋಗಗೊಳಿಸುತ್ತಿರುವುದನ್ನು ವಿರೋಧಿಸಿ ನಾಲ್ವರು ಶಂಕರಾಚಾರ್ಯರು ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಹೇಳಿರುವುದು ವರದಿಯಾಗಿದೆ. ಸಮಸ್ತ ಹಿಂದೂಗಳನ್ನು ಒಗ್ಗೂಡಿಸುವ ಕಾರ್ಯಕ್ರಮವಾಗಬೇಕಾಗಿದ್ದ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮ ಬಿಜೆಪಿಯ ರಾಜಕೀಯದಿಂದಾಗಿ ಹಿಂದೂಗಳನ್ನು ಒಡೆಯುವ ಕಾರ್ಯಕ್ರಮವಾಗಿರುವುದು ದುರಂತ.
ಇನ್ನೇನು ಹತ್ತು ವರ್ಷಗಳ ಆಡಳಿತವನ್ನು ಪೂರ್ಣಗೊಳಿಸಲಿರುವ ಪ್ರಧಾನಿ ನರೇಂದ್ರಮೋದಿ ಅವರಿಗೆ ತಮ್ಮ ಸಾಧನೆಯನ್ನು ಮತದಾರರ ಮುಂದಿಟ್ಟು ಚುನಾವಣೆಯನ್ನು ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಲೋಕಸಭಾ ಚುನಾವಣೆಯ ಕಾಲದಲ್ಲಿಯೇ ಅವಸರದಿಂದ ಅಪೂರ್ಣ ಸ್ಥಿತಿಯಲ್ಲಿರುವ ರಾಮಮಂದಿರವನ್ನು ಉದ್ಘಾಟಿಸಿ ಈ ಮೂಲಕ ಹಿಂದುತ್ವದ ಅಲೆಯನ್ನು ಬಡಿದೆಬ್ಬಿಸಿ ಅದರ ಮರೆಯಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಾರೆ.ಕಳೆದ 30-35 ವರ್ಷಗಳಿಂದ ಬಿಜೆಪಿ ಮತ್ತು ಸಂಘ ಪರಿವಾರ ರಾಮನ ಹೆಸರಲ್ಲಿ ನಡೆಸಿಕೊಂಡು ಬಂದಿರುವ ರಾಜಕೀಯವನ್ನು ಗಂಭೀರವಾಗಿ ಗಮನಿಸುತ್ತಾ ಬಂದಿರುವ ದೇಶದ ಜನತೆ ಈ ಬಾರಿ ಇಂತಹ ಡೋಂಗಿ ಹಿಂದುತ್ವದ ಜಾಲಕ್ಕೆ ಖಂಡಿತ ಬಲಿಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ. ಈಗಾಗಲೇ ಜನ ಇಟ್ಟಿಗೆಯ ಹೆಸರಲ್ಲಿ ಸಂಗ್ರಹಿಸಿರುವ ದೇಣಿಗೆಯ ಲೆಕ್ಕವನ್ನು ಕೇಳತೊಡಗಿದ್ದಾರೆ.
ನಾವು ಹಿಂದೂ ಧರ್ಮದ ವಿರೋಧಿಗಳಲ್ಲ, ಧರ್ಮದ ಹೆಸರಲ್ಲಿ ನಡೆಸಲಾಗುವ ಅಸ್ಪ್ರಶ್ಯತೆ, ಜಾತೀಯತೆ, ಅಂಧಶ್ರದ್ದೆ, ಕಂದಾಚಾರಗಳನ್ನು ವಿರೋಧಿಸುತ್ತೇವೆ. ಧರ್ಮವನ್ನು ರಾಜಕಾರಣಕ್ಕೆ ಬಳಸುವುದರ ಬಗ್ಗೆ ನಮ್ಮ ಸಂಪೂರ್ಣ ವಿರೋಧ ಇದೆ. ಮಹಾತ್ಮ ಗಾಂಧೀಜಿ, ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರು, ಕುವೆಂಪು ಅವರು ಸೇರಿದಂತೆ ದೇಶದ ಅನೇಕಾನೇಕ ಮಹನೀಯರು ಆಚರಿಸುತ್ತಾ ಬಂದಿರುವ ಹಿಂದೂ ಧರ್ಮದ ಬಗ್ಗೆ ನಮಗೆ ಯಾವುದೇ ತಕರಾರಿಲ್ಲ. ಆದರೆ ಧರ್ಮವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಸಂಘ ಪರಿವಾರದ ಡೋಂಗಿ ಹಿಂದುತ್ವವನ್ನು ನಾವು ವಿರೋಧಿಸುತ್ತಲೇ ಇರುತ್ತೇವೆ. ಈ ವಿಷಯದಲ್ಲಿ ನಾವು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರವನ್ನು ಮಾಡುವುದಿಲ್ಲ.
ಜನಪ್ರತಿನಿಧಿಯಾಗಿ ಇಲ್ಲಿಯ ವರೆಗೆ ನೂರಾರು ದೇವಸ್ಥಾನಗಳ ಪ್ರತಿಷ್ಠಾಪನೆ, ಜೀರ್ಣೋದ್ದಾರದಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ನನ್ನ ಊರಿನಲ್ಲಿಯೇ ರಾಮನ ದೇವಸ್ಥಾನವನ್ನು ನಿರ್ಮಾಣ ಮಾಡಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದ್ದೇನೆ. ಇದೇ ರೀತಿ ಮಸೀದಿ-ಚರ್ಚ್ ಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ಸಲ್ಲಿಸಿದ್ದೇನೆ. ಸರ್ವಧರ್ಮ ಸಮಭಾವ ಸಂವಿಧಾನದ ಆಶಯವಾಗಿದೆ. ಅದಕ್ಕೆ ನಾವೆಲ್ಲರೂ ಬದ್ಧರಾಗಲೇ ಬೇಕಾಗಿದೆ.ಶ್ರೀರಾಮನ ಮೇಲೆ ನಂಬಿಕೆ ಮತ್ತು ಭಕ್ತಿ ಇದ್ದವರು ಪ್ರತಿದಿನ ಆತನನ್ನು ಪೂಜಿಸುವುದು ಹೇಗೆ ಧಾರ್ಮಿಕ ಕರ್ತವ್ಯವೋ, ಅದೇ ರೀತಿ ಶ್ರೀರಾಮನನ್ನು ರಾಜಕೀಯಕ್ಕೆ ಬಳಸುವವರ ವಿರುದ್ಧ ದನಿ ಎತ್ತುವುದು ಕೂಡಾ ಅಷ್ಟೇ ಪವಿತ್ರವಾದ ಧಾರ್ಮಿಕ ಕರ್ತವ್ಯವಾಗಿದೆ. ಯಾವ ಧರ್ಮ ಕೂಡಾ ಇನ್ನೊಂದು ಧರ್ಮವನ್ನು ದ್ವೇಷಿಸುವುದಿಲ್ಲ, ನಿರಾಕರಿಸುವುದಿಲ್ಲ. ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವ ಸಂವಿಧಾನದ ಆಶಯಕ್ಕೆ ನಾನು ಮತ್ತು ನಮ್ಮ ಪಕ್ಷ ಬದ್ಧವಾಗಿದೆ.