ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಪಘಾತ

ಬಂಟ್ವಾಳ ಶಾಸಕ ರಾಜೇಶ್ ನಾಯ್ ಉಳಿಪ್ಪಾಡಿಗುತ್ತು ಅವರಿಗೆ ಕಾರು ಡಿಕ್ಕಿ, ಶಾಸಕರು ಅಪಾಯದಿಂದ ಪಾರು.

Published

on

ವಿಟ್ಲ: ಬಂಟ್ವಾಳ ಶಾಸಕ ರಾಜೇಶ್ ನಾಯ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಜ.14ರಂದು ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಘಟನೆಯಿಂದಾಗಿ ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ

ಶಾಸಕ ರಾಜೇಶ್ ನಾಯ್ಡ್ ಅವರು ಜ.14ರಂದು ಸಂಕ್ರಮಣದ ಅಂಗವಾಗಿ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಾಸು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿರುವ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಶಾಸಕರು ಕಾರಿನತ್ತ ಹೆಜ್ಜೆ ಹಾಕುತ್ತಿದ್ದ ವೇಳೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಗುದ್ದಿದ ರಭಸಕ್ಕೆ ಶಾಸಕರು ಬಿದ್ದು ಗಾಯವಾಗಿದ್ದು, ಕೂಡಲೇ ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶಾಸಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.


ಇದೀಗ ಚಿಕಿತ್ಸೆ ಪಡೆದುಕೊಂಡು ಶಾಸಕರು ಮನೆಗೆ ತೆರಳಿದ್ದಾರೆ ಎಂದು ಮಾಹಿತಿ ಲಭಿಸಿದೆ.ಡಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಸ್ಥಳೀಯರು ಗುರುಪುರದಲ್ಲಿ ಹಿಡಿದು ಚಾಲಕ ಸಹಿತ ಕಾರನ್ನು ಬಜೆ ಪೋಲೀಸರಿಗೆ ಒಪ್ಪಿಸಿದ್ದಾರೆ.ಕಾರು ಚಾಲಕನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಲಭಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version