ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ರಾಜ್ಯ ಸರಕಾರ ಮತ್ತು ರಾಜ್ಯ ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ- ಉಳ್ಳಾಲ ಕಂಬಳದಲ್ಲಿ ಕ್ರೀಡಾ ಸಚಿವ ನಾಗೇಂದ್ರ

Published

on

ಉಳ್ಳಾಲ: ರಾಜ್ಯ ಸರಕಾರ ಮತ್ತು ರಾಜ್ಯ ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ.
ನರಿಂಗಾನ ಕಂಬಳವನ್ನು ಕಾಸರಗೋಡು ಲೋಕಸಭೆ ಸದಸ್ಯರಾದ ರಾಜಮೋಹನ್ ಉನ್ನಿತಾನ್ ವೀಕ್ಷಿಸಿದರು. ಇವರು ಲೋಕಸಭೆಯಲ್ಲಿ ತುಳು ಭಾಷೆಯ ಸ್ಥಾನಮಾನಕ್ಕೆ ಗಟ್ಟಿ ದ್ವನಿ ಯಲ್ಲಿ ಒತ್ತಾಯಿಸಿದವರಾಗಿರುತ್ತಾರೆ.

ಉಳ್ಳಾಲ ತಾಲೂಕಿನ ನರಿಂಗಾನದ ಲವ- ಕುಶ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನದ ಮೋರ್ಲ ಬೋಳದಲ್ಲಿ ನಡೆದ ದ್ವಿತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ `ನರಿಂಗಾನ ಕಂಬಳೋತ್ಸ’ವದಲ್ಲಿ ಭಾಗವಹಿಸಿ ಮಾತನಾಡಿದರು. ಮಂಗಳೂರಿನ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಿದಾಗ ಕ್ರೀಡಾ ಇಲಾಖೆ ಒಂದು ಕೋಟಿಯನ್ನು ಕೊಟ್ಟಿದೆ. ಕರಾವಳಿಯಲ್ಲಿ ನಡೆಯುವ ಕಂಬಳಕ್ಕೂ ಪ್ರೋತ್ಸಾಹ ನೀಡಲು ಸಿದ್ಧವಿದೆ ಎಂದರು.



ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ ಎಲ್ಲಾ ಜಾತಿ, ಧರ್ಮದವರು ಸೇರಿ ಮಾಡುವ ಸಾರ್ವಜನಿಕ ಕಂಬಳವಾಗಿದ್ದು, ಇದು ಸೌಹಾರ್ದತೆ ಪ್ರತೀಕವಾಗಿದೆ ಎಂದರು. ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಹರೀಶ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಕ್ರೀಡಾ ಕಮಿಷನರ್ ಶಶಿಕುಮಾರ್, ಕಣಚೂರು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಯು.ಕಣಚೂರು ಮೋನು, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಮಂಜನಾಡಿ ದರ್ಗಾ ಅಧ್ಯಕ್ಷ ಅಬ್ದುಲ್ ಅಜೀಝ್ ಮೈಸೂರು ಬಾವ, ದ.ಕ.ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ, ಮುಂಬೈ ಉದ್ಯಮಿ ವಿವೇಕ್ ಶೆಟ್ಟಿ ಬೊಲ್ಯಗುತ್ತು ಹಾಗೂ ರಕ್ಷಿತ್ ಶಿವರಾಮ್, ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕಿ ಡಿ. ಪದ್ಮಾವತಿ, ಕಟಪಾಡಿ ಕಂಬಳದ ರೋಹಿತ್ ಹೆಗ್ಡೆ, ತುಳುನಾಡ ರಕ್ಷಣಾ ವೇದಿಕೆ ಯೋಗೀಶ್ ಶೆಟ್ಟಿ, ಮೈಸೂರು ಇಲೆಕ್ಟ್ರಾಲ್ ನಿಗಮದ ಮಾಜಿ ಅದ್ಯಕ್ಷರಾದ ಸಂತೋಷ್ ಬೊಳಿಯಾರ್, ಹರ್ಷದ್ ವರ್ಕಾಡಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಪಜೀರು ಕೇದಗೆಬೈಲ್‍ನಲ್ಲಿ ಲವ – ಕುಶ ಕಂಬಳವನ್ನು 25 ವರ್ಷಗಳ ಕಾಲ ಮುನ್ನಡೆಸಿದ ಮಿತ್ತಕೋಡಿ ವೆಂಕಪ್ಪ ಕಾಜವ ಮತ್ತು ಉಮೇಶ್ ಮಹಾಬಲ ಶೆಟ್ಟಿ ಮಾಣಿಸಾಗು ಅವರನ್ನು ಗೌರವಿಸಲಾಯಿತು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version