Published
11 months agoon
By
Akkare Newsಪುತ್ತೂರು: ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ, ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಉಪ್ಪಿನಂಗಡಿ ವಾಟರ್ ಸಪ್ಪೆ ಮತ್ತು ಉಪ್ಪಿನಂಗಡಿ ಎಕ್ಸ್ಪ್ರೆಸ್ ಮತ್ತು 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಫೀಡರ್ನಲ್ಲಿ ಜ.18ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆ
ಮಾಡಲಾಗುವುದು.
ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 110/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ಕೊಯಿಲ, ಹಿರೇಬಂಡಾಡಿ, ರಾಮಕುಂಜ, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ