ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
6 months agoon
By
Akkare News2024ರ ಎಸ್.ಎಸ್ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.ಎಸ್‌ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ, ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 22ರವರೆಗೆ ನಡೆಯಲಿದೆ.ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ.25-03-2024ರ ಸೋಮವಾರ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, +ಇಂಗ್ಲಿಷ್- NCERT, 27-03-2024ರಂದು ಸಮಾಜ ವಿಜ್ಞಾನ, 30-03-2024ರಂದು ವಿಜ್ಞಾನ, ರಾಜ್ಯಶಾಸ್ತ್ರ, 02-04-2024ರಂದು ಗಣಿತ, ಸಮಾಜಶಾಸ್ತ್ರ, 03-04-2024 ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿರೋ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಬೇಕಾಗಿದೆ. ಅದೇ ರೀತಿ ದ್ವಿತೀಯ ಪಿಯುಸಿಯ ಪರೀಕ್ಷೆಯು ಈ ಕೆಳಗಿನಂತೆ ನಡೆಯಲಿದೆ.
ಮಾ.01-2024: ಕನ್ನಡ, ಅರೇಬಿಕ್
ಮಾ.04-2024: ಗಣಿತ
ಮಾ.05-2024: ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ.06-2024: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್
ಮಾ.07-2024: ಇತಿಹಾಸ ಹಾಗೂ ಭೌತಶಾಸ್ತ್ರ
ಮಾ.09-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ
ಮಾ.11-2024: ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.13-2024: ಇಂಗ್ಲೀಷ್
ಮಾ.15-2024: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ
ಮಾ.16-2024: ಅರ್ಥಶಾಸ್ತ್ರ
ಮಾ.18-2024: ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
ಮಾ.20-2024: ಸಮಾಜಶಾಸ್ತ್ರ ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
ಮಾ.22-2024: ಹಿಂದಿ ಪರೀಕ್ಷೆ ನಡೆಯಲಿದೆ.
ಮೂರು ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ಈ ವರ್ಷ ಎಸ್‌ಎಸ್‌ಎಲ್‌ಸಿ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವರಿಕ ಪರೀಕ್ಷೆಯನ್ನು ಮೂರು ಬಾರಿ ಬರೆಯಬಹುದು. ಈ ಹಿಂದೆ ಒಂದು ಬಾರಿ ವರಿಕ ಪರೀಕ್ಷೆ ಬರೆದು, ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಬಾರಿ ವಿದ್ಯಾರ್ಥಿಗಳು ಪಾಸಾಗಲಿ, ಫೇಲಾಗಲಿ ಮೂರು ಬಾರಿ ಪರೀಕ್ಷೆ ಬರೆಯಬಹುದು. ಮೂರರಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಮುಂದಿನ ಅನುಕೂಲಗಳಿಗಾಗಿ ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ.
ಮೂರು ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ:
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1: ಮಾರ್ಚ್ 30ರಿಂದ ಏಪ್ರಿಲ್ 15ರವರೆಗೆ.ಮೇ 8ರಂದು ಫಲಿತಾಂಶ.ಮೇ.23ರಂದು ಮರು ಮೌಲ್ಯಮಾಪನ ಫಲಿತಾಂಶ ಪ್ರಕಟ.
ಎಸ್ಎಸ್ಎಲ್ಸಿ ಪರೀಕ್ಷೆ-2: ಜೂನ್ 12ರಿಂದ 19ರವರೆಗೆ ಪರೀಕ್ಷೆ. ಜೂನ್ 29 ಕ್ಕೆ ಫಲಿತಾಂಶ.ಜುಲೈ 10 ರಂದು ಮರುಮೌಲ್ಯಮಾಪನದ ಫಲಿತಾಂಶ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-3: ಜೂನ್ 29ರಿಂದ ಆಗಸ್ಟ್ 5ರವರೆಗೆ ಪರೀಕ್ಷೆ. ಆಗಸ್ಟ್ 19 ರಂದು ಫಲಿತಾಂಶ.ಆಗಸ್ಟ್ 26ರಂದು ಮರುಮೌಲ್ಯಮಾಪನ ಫಲಿತಾಂಶ ಪ್ರಕಟವಾಗಲಿದೆ.