ಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನPublished
2 years agoon
By
Akkare News
ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ ೫ ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ‍್ಯಯವರು ಪ್ರವಾಸೋದ್ಯಮ , ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್‌ಗೆ ಮನವಿ ಸಲ್ಲಿಸಿದ್ದಾರೆ.
ಸಚಿವರನ್ನು ಶುಕ್ರವಾರ ಭೇಟಿಯಾದ ಶಾಸಕರು ದ ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪುರಾತನ ಕಾಲದಿಂದಲೂ ಕಂಬಳ ಕ್ರೀಡೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಕಂಬಳ ತುಳುನಾಡಿನ ಜನಪದ ಕ್ರೀಡೆಯಾಗಿದ್ದು ಅದನ್ನು ಉಳಿಸಿಕೊಂಡು ಹೋಗುವಲ್ಲಿ ತುಳುನಾಡಿನ ಕಂಬಳ ಪ್ರಿಯರು ಯಶಸ್ವಿಯಾಗಿದ್ದಾರೆ. ಕಂಬಳ ಕ್ರೀಡೆಯನ್ನು ನಡೆಸಬೇಕಾದರೆ ಲಕ್ಷಾಂತರ ರೂ ಖರ್ಚುಗಳಿರುತ್ತದೆ.
ಕಂಬಳಕ್ಕೆ ಸರಕಾರ ಕನಿಷ್ಠ ೫ ಲಕ್ಷ ರೂ ಅನುದಾನವನ್ನು ನೀಡುವ ಮೂಲಕ ಪುರಾತನ ಜನಪದ ಕ್ರೀಡೆಯನ್ನು ಉಳಿಸುವಲ್ಲಿ ಸರಕಾರ ಸಹಕಾರವನ್ನು ನೀಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ. ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು ಸರಕಾರದಿಂದ ನೆರವು ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೆಂಗಳೂರು ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ಮುರಳೀಧರ್ ರೈ ಮಠಂತಬೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ ಉಪಸ್ಥಿತರಿದ್ದರು.
ತಾನು ಶಾಸಕನಾದರೆ ಉಭಯ ಜಿಲ್ಲೆಗಳಲ್ಲಿ ನಡೆಯುವ ಎಲ್ಲಾ ಕಂಬಳಕ್ಕೂ ಸರಕಾರದಿಂದ ನೆರವು ಒದಗಿಸುವ ಬಗ್ಗೆ ಭರವಸೆಯನ್ನು ನೀಡಿದ್ದೆ. ನೀಡಿದ ಭರವಸೆಯನ್ನುಈಡೇರಿಸುವ ನಿಟ್ಟಿನಲ್ಲಿ ನಾನು ಸಚಿವರಿಗೆ ಮನವಿಯನ್ನು ಮಾಡಿದ್ದೇನೆ. ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಂಬಳ ಕ್ರೀಡೆಗೆ ಸರಕಾರದಿಂದ ಅನುದಾನ ಬರಬಹುದು ಎಂಬ ನಂಬಿಕೆಯೂ ಇದೆ.ಅಶೋಕ್ ರೈ, ಶಾಸಕರು, ಪುತ್ತೂರು