ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ರಾಜ್ಯಪಾಲರ ಪ್ರಶಸ್ತಿಗೆ ಆಯ್ಕೆಯಾದ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು.

Published

on

ಪುತ್ತೂರು :ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಳದಲ್ಲಿ ನಡೆದ ಕಬ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9 ವಿದ್ಯಾರ್ಥಿಗಳು ತೇರ್ಗಡೆಗೊಂಡು ಬೆಂಗಳೂರಿನ ರಾಜ ಭವನದ ಗಾಜಿನ ಮನೆಯಲ್ಲಿ ಜ.19 ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.





ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.5ನೇ ತರಗತಿ ವಿದ್ಯಾರ್ಥಿಗಳಾದ ಅದ್ಭತ ಶಂಕರ ವೈ, ಆರ್ಯನ್ ಪಿ.ಎಲ್., ಕೃತಿಕ್ ಬಿ.ಆರ್., ಎಂ ಜಶಿತ್ ಆಚಾರ್ಯ, ಪ್ರಣವ್ ಕೇಕುಣ್ಣಾಯ, ರಾಹುಲ್ ಜಿ.ಎಂ. ಸಂಹಿತ್ ಸಿ. ಅಲಾರ್, ಸ್ಕಂದ ಎಂ., ವಸಿಷ್ಟ ಸಿ.ಎಸ್. ಹಾಗೂ ಲೇಡಿ ಕಬ್ ಮಾಸ್ಟರ್ ಪುಷ್ಪಲತಾ ಕೆ. ಭಾಗವಹಿಸಲಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement