ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮ ಉದ್ಘಾಟನೆ. ನಾನು ನಾಸ್ತಿಕನಲ್ಲ – ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ಸಿಎಂ ಸಿದ್ದರಾಮಯ್ಯ

Published

on

ಬಿದರಹಳ್ಳಿ ಹೋಬಳಿಯ ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ನಡೆದ ಮಹಾ ಕುಂಭಾಭಿಷೇಕದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದರು.ಬಳಿಕ ಮಾತನಾಡಿದ ಸಿದ್ದರಾಮಯ್ಯ ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ.



ನಾನು ನಾಸ್ತಿಕನಲ್ಲ – ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ.ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲಾ ಸಕುಟುಂಬಸ್ಥರು.




qq
ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ ಎಂದರು.ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಕೊಟ್ಟರು. ದೇವರು ನಮ್ಮ ಆತ್ಮ ಮತ್ತು ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣನವರು ನುಡಿದರು. ದೇಹವೇ ದೇಗುಲ ಎನ್ನುವ ಸಂದೇಶವನ್ನು ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ.ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಜೈ ಶ್ರೀರಾಮ್ ಎಂದು ಘೋಷಣೆ ಮೂಲಕ ನನ್ನ ಮಾತು ಮುಗಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version