ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಂತರರಾಷ್ಟ್ರೀಯ

ಜ.27ರಂದು 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ- ಚೆನ್ನಯ ಜೋಡುಕೆರೆ ಕಂಬಳ

Published

on

ಪುತ್ತೂರು: 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಜ.27 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಿ.ಜಯಂತ ರೈ ಹಾಗೂ ದಿ.ಎನ್. ಮುತ್ತಪ್ಪ ರೈ ಅವರ ನೇತೃತ್ವದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಗೌರವಾಧ್ಯಕ್ಷತೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ಗೌರವ ಉಪಸ್ಥಿತಿಯಲ್ಲಿ ಕಳೆದ ಮೂವತ್ತು ವರ್ಷಗಳಿಂದ ನಡೆದುಕೊಂಡು ಬಂದಿರುವ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ಭಾರೀ ಮಹತ್ವವಿದೆ. ಈ ಮೂಲಕ ಪುತ್ತೂರಿನ ಸಂಸ್ಕೃತಿ, ಘನತೆಯನ್ನು ಎತ್ತಿ ಹಿಡಿದಿದೆ ಎಂದು ಹೇಳಿದರು.

ಜ.27 ರಂದು ಬೆಳಿಗ್ಗೆ ಉದ್ಘಾಟನಾ ಸಮಾರಂಭವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‌ ಮುಳಿಯ ಉದ್ಘಾಟಿಸಲಿದ್ದು, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂತ ಫಿಲೋಮಿನಾ ಕಾಲೇಜು ಪ್ರಾಂಶುಪಾಲ ರೆ.ಫಾ.ಆಂಟನಿ ಪ್ರಕಾಶ್ ಮೊಂತೆರೋ, ಡಾ.ಸುರೇಶ್ ಪುತ್ತೂರಾಯ, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.





ಸಂಜೆ 6.00 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದು, ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೇಂದ್ರ ನಹಕಾರಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಶಾಸಕರಾದ ಪ್ರದೀಪ್ ಈಶ್ವರ್, ಮಂಥರ್ ಗೌಡ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ರಾಜೇಶ್ ನಾಯ್ಡ್, ಭರತ್ ಶೆಟ್ಟಿ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ವಿಧಾನಪರಿಷತ್ ಸದಸ್ಯ ಹರೀಶ್‌ ಕುಮಾರತ್ತಿತರರು ರಾಜಕೀಯ ನೇತಾರರು, ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ವಿಶೇಷ ಆಕರ್ಷಣೆಯಾಗಿ ನಾಯಕ ನಟರಾದ ಪ್ರಜ್ವಲ್ ದೇವರಾಜ್, ಕಾರ್ತಿಕ್ ಜಯರಾಮ್, ನಟಿಯರಾದ ಸೋನು ಗೌಡ, ನೇಹಾ ಗೌಡ, ನಟರಾದ ಗುರುನಂದನ್, ಅರವಿಂದ ಬೋಳಾರ್, ಅರ್ಜುನ್ ಕಾಪಿಕಾಡ್, ರೂಪೇಶ್ ಶೆಟ್ಟಿ, ಚಂದನ್ ಗೌಡ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಮಾಣಿಸಾಗು ಉಮೇಶ್ ಶೆಟ್ಟಿ (ಕಂಬಳ), ಕೇಶವ ಗೌಡ (ಉದ್ಯಮ), ರವೀಂದ್ರ ಶೆಟ್ಟಿ ನುಳಿಯಾಲು (ಧಾರ್ಮಿಕ), ದೀಪಕ್ ರೈ ಪಾಣಾಜೆ (ನಟ), ಜೈಗುರು ಆಚಾರ್ ಹಿಂದಾರ್ (ಹೈನುಗಾರಿಕೆ), ಕಡಬ ಶ್ರೀನಿವಾಸ ರೈ (ಯಕ್ಷಗಾನ) ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.

ಜ.28 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯೆ ಮಲ್ಲಿಕಾ ಪಕ್ಕಳ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಸಂಚಾಲಕ ವಸಂತ ಕುಮಾರ್ ರೈ, ಕೋಶಾಧಿಕಾರಿ ಈಶ್ವರ ಭಟ್‌ ಪಂಜಿಗುಡ್ಡೆ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ., ಉಪಾಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement