ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

31ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಸಂಭ್ರಮದ ಚಾಲನೆ

Published

on

ಪುತ್ತೂರು:31ನೇ ಸಂಭ್ರಮದೊಂದಿಗೆ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಚಾಲನೆ ದೊರೆತಿದೆ. ಕರೆಗೆ ಪೂಜಿಸಲಾಗಿ ಕಂಬಳಕ್ಕೆ ವಿದ್ಯುಕ್ತವಾಗಿ ಚಾಲನೆ ದೊರೆತಿದೆ.ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ ಶಾಸಕ ಅಶೋಕ್ ಕುಮಾ‌ರ್ ರೈ ಕೆ ಎಸ್ ಅವರ ಗೌರವ ಸಂಚಾಲಕತ್ವದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿರವರ ಮಾರ್ಗದರ್ಶನದಲ್ಲಿ ಇತಿಹಾಸ ಪ್ರಸಿದ್ಧ ತುಳುನಾಡ ಜಾನಪದ ಕ್ರೀಡೆಗಳಲ್ಲೊಂದಾದ ಕೋಟಿ-ಚೆನ್ನಯ ಜೋಡುಕರೆ ಕಂಬಳ ನಡೆಯುತ್ತಿದೆ.







ಕಂಬಳದ ಉದ್ಘಾಟನೆಯನ್ನು ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್‌ ಕಂಬಳವನ್ನು ನೆರವೇರಿಸಿದರು. ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ ಸೀತಾರಾಮ ರೈ ಅಧ್ಯಕ್ಷತೆ ವಹಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version