ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಶಾಸಕರ ಅಭಿನಂದನೆ ಕಟೌಟ ಗೆ ಹಾನಿ ನಗರ ಕಾಂಗ್ರೆಸ್ ನಿಂದ ಪೊಲೀಸ್ ಇಲಾಖೆಗೆ ದೂರು

Published

on

ಜ.28.ಪುತ್ತೂರು ನಗರ ಸಭಾ ವ್ಯಾಪ್ತಿಯಲ್ಲಿ ನಗರೋತ್ತಾನ ಯೋಜನೆಯಡಿಯಲ್ಲಿ ಮಂಜೂರಾಗಿರುವ ಪ್ರಮುಖ ರಸ್ತೆ ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈಯವರಿಂದ ದಿನಾಂಕ 21/1/2024 ರಂದು ಆದಿತ್ಯವಾರ ಶಂಕುಸ್ಥಾಪನೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಅದರಂತೆ ಈ ಹಿಂದೆ ಕಾಂಕ್ರೀಟೀಕರಣ ಗೊಳಿಸಲಾಗಿದ್ದ ಕೋರ್ಟ್ ರಸ್ತೆಯು ಸಂಪೂರ್ಣ ಕಳಪೆ ಯಾಗಿ ಅಲ್ಲಲ್ಲಿ ಕಾಂಕ್ರೀಟ್ ಕಿತ್ತು ಹೋಗಿ ಸಂಚಾರಕ್ಕೆ ತೊಂದರೆ ಯಾಗುತ್ತಿರುವುದಕ್ಕೆ ಸದರಿ ರಸ್ತೆಯನ್ನು ಸುಸಜ್ಜಿತವಾಗಿ ಅಭಿವೃದ್ಧಿ ಗೊಳಿಸುವ ಉದ್ದೇಶದಿಂದ ಕಾಂಕ್ರೀಟ್ ರಸ್ತೆ ಮೇಲೆ ವೈಟ್ ಟಾಪಿಂಗ್ ಮಾಡುವ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಯವರು 42 ಲಕ್ಷ ರೂಪಾಯಿ ಅನುದಾನ ಮಂಜೂರು ಗೊಳಿಸಿ ಕಾಮಗಾರಿಯ ಶಂಕುಸ್ಥಾಪನೆ ಮಾಡಿದ್ದರು ಸದರಿ ಕಾಮಗಾರಿಗೆ ಅನುದಾನ ಮಂಜೂರು ಮಾಡಿರುವ ಶಾಸಕ ಅಶೋಕ್ ಕುಮಾರ್ ರೈಯವರಿಗೆ ಅಭಿನಂದನೆಗಳು ಸಲ್ಲಿಸುವ ಫ್ಲೆಕ್ಸ್ ನ್ನು ಮುಖ್ಯ ರಸ್ತೆಯಿಂದ ಕೋರ್ಟ್ ರಸ್ತೆಗೆ ತಿರುಗುವಲ್ಲಿ ನಗರ ಕಾಂಗ್ರೆಸ್ ವತಿಯಿಂದ ಅಳವಡಿಸಲಾಗಿತ್ತು.






ಈ ಫ್ಲೆಕ್ಸ್ ನ್ನು ರಾತ್ರಿ ಯಾರೋ ಕಿಡಿಗೇಡಿಗಳು ಹರಿದು ಹಾನಿಗೊಳಿಸಿರುವ ಪ್ರಕರಣ ನಡೆದಿದ್ದು ಹರಿದು ಹಾನಿ ಗೊಳಿಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಯವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ ಎಂದು ತಿಳಿದು ಬಂದಿದೆ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version