Published
11 months agoon
By
Akkare Newsಪುತ್ತೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿ, ಬೈಕ್ ಸಹಸವಾರೆ ಶಿಕ್ಷಕಿಯೋರ್ವರು ಮೃತಪಟ್ಟ ಘಟನೆ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಸೋಮವಾರ ನಡೆದಿದೆ.
ಬೈಕ್ ನ ಹಿಂಬದಿ ಸವಾರೆ ಮಾಣಿ ಖಾಸಗಿ ಶಾಲಾ ಶಿಕ್ಷಕಿ ಅನಿತಾ(35) ಮೃತಪಟ್ಟವರು. ಬೈಕ್ ಸವಾರರಾಗಿದ್ದ ಇಡ್ಕಿದು ಗ್ರಾಮದ ಮಿತ್ತೂರು ಮದಕ ನಿವಾಸಿ ಅನಿತಾ ಅವರ ಪತಿ ಸುರೇಶ್ ಕುಲಾಲ್ ಹಾಗೂ ಜತೆಗಿದ್ದ ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.