ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಆಪರೇಷನ್ ಕಮಲ ಲಕ್ಷ್ಮಣ ಸವದಿಗೆ ಬಿಜೆಪಿ ಕೊಡ್ತು ಭರ್ಜರಿ ಆಫ‌ರ್!!

Published

on

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಶಾಸಕರಾಗಿರುವ ಲಕ್ಷ್ಮಣ ಸವದಿಯನ್ನು ಘರ್ ವಾಪ್ಸಿ ಮಾಡುವ ನಿಟ್ಟಿನಲ್ಲಿ ಬಿಜೆಪಿ ಶತಾಯ ಗತಾಯ ಪ್ರಯತ್ನ ಮಾಡುತ್ತಿದ್ದು, ಇದೀಗ ಸವದಿಗೆ ಭರ್ಜರಿ ಆಫರ್ ನೀಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ತೊರೆದಿದ್ದರು. ಆದರೆ ಅಚ್ಚರಿ ಎಂಬಂತೆ ಕೆಲವು ದಿನಗಳ ಹಿಂದಷ್ಟೇ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರಿದರು. ಈ ಬೆನ್ನಲ್ಲೇ ಅಪಾರ ಜನ ಬೆಂಬಲ ಇರುವ ನಾಯಕ ಲಕ್ಷ್ಮಣ ಸವದಿಯನ್ನು ಮರಳಿ ತರಲು ವಿಜಯೇಂದ್ರ ನೇತೃತ್ವದ ಬಿಜೆಪಿ ಪ್ರಯತ್ನ ನಡೆಸುತ್ತಿದ್ದು, ಲೋಕಸಭಾ ಟಿಕೆಟ್ಆಫರ್ ನೀಡಿದೆ.





ಹೌದು, ಈಗಾಗಲೇ ಬೆಳಗಾವಿಯ ಸ್ಥಳೀಯ ಬಿಜೆಪಿ ನಾಯಕರು ಶಾಸಕರಾದ ಲಕ್ಷ್ಮಣ್‌ ಸವದಿ ಅವರನ್ನ ಸಂಪರ್ಕಿಸಿದ್ದು, ಸವದಿ ಜೊತೆಗೆ ಮಾತುಕತೆ ನಡೆಸಿದ್ದಾರೆ.ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ನೀಡುವ ಭರವಸೆಯನ್ನ ಬಿಜೆಪಿ ಹೈಕಮಾಂಡ್‌ ನೀಡಿರುವ ಬಗ್ಗೆ ಲಕ್ಷ್ಮಣ್‌ ಸವದಿ ಜೊತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಉತ್ತಮ ಸ್ಥಾನಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ದೊರೆತಿದೆ. ಒಟ್ಟಿನಲ್ಲಿ ಲಕ್ಷ್ಮಣ ಸವದಿ ಕೂಡ ಸದ್ಯದಲ್ಲೇ ಬಿಜೆಪಿ ಸೇರುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement