Published
1 year agoon
By
Akkare Newsಪುತ್ತೂರು: ಪುತ್ತೂರು: ನವವಿವಾಹಿತೆ ಶೋಭಾ (26) ಪುತ್ತೂರಿನ ಕುರಿಯ ಗಡಾಜೆ ಎಂಬಲ್ಲಿ ತನ್ನ ಪತಿಯ ಮನೆಯಲ್ಲಿ ಸೋಮವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮಣ್ಣ ಗೌಡ ಮತ್ತು ಪುಷ್ಪ ದಂಪತಿ ಪುತ್ರಿಯಾಗಿರುವ ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಗಡಾಜೆ ರೋಹಿತ್ ಅವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರಣ ತಿಳಿದು ಬರಬೇಕಷ್ಟೇ.