ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪುತ್ತೂರು ಘಟಕದ ಹಿರಿಯ ಗೃಹರಕ್ಷಕ ಶ್ರೀ ಜಗನ್ನಾಥ ಪಿ. ಇವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆ

Published

on

ಪುತ್ತೂರು ಘಟಕದ ಹಿರಿಯ ಗೃಹರಕ್ಷಕರಾದ ಶ್ರೀ ಜಗನ್ನಾಥ ಪಿ, ಸೆಕ್ಷನ್ ಲೀಡರ್, ಮೆಟಲ್ ನಂ 440 ಇವರ ಹೆಸರನ್ನು ಮಾನ್ಯ ಮುಖ್ಯಮಂತ್ರಿಗಳ ಪದರಕ್ಕೆ ಜಿಲ್ಲಾ ಗೃಹರಕ್ಷಕ ದಳದ ಸಮಾದೇಶ್ವರಾದ ಡಾ|| ಮುರಲೀ ಮೋಹನ್ ಚೂಂತಾರು ಶಿಫಾರಸ್ಸು ಮಾಡಿರುವ ಮೇರೆಗೆ ಸದರಿಯವರಿಗೆ ಸರ್ಕಾರ ಗುರುತಿಸಿ 2023ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಯಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪುತ್ತೂರು ಘಟಕದ ಹಿರಿಯ ಗೃಹರಕ್ಷಕರಾದ ಶ್ರೀ ಜಗನ್ನಾಥ ಪಿ, ಸೆಕ್ಷನ್ ಲೀಡರ್ ಇವರು ದಿನಾಂಕ: 01-04-2000 ರಲ್ಲಿ ಇಲಾಖೆಗೆ ಸೇರಿ ಸುಮಾರು 24 ವರ್ಷಗಳ ಕಾಲ ನಿಷ್ಕಾಮ ಸೇವೆಯನ್ನು ಸಲ್ಲಿಸಿರುತ್ತಾರೆ ಸದರಿಯವರು ವಿಧಾನಸಭಾ ಚುನಾವಣೆ, ಜಿಲ್ಲಾ ಪಂಚಾಯತ್ ಚುನಾವಣೆ, ಗ್ರಾಮ ಪಂಚಾಯತ್ ಚುನಾವಣೆ, ತಾಲೂಕು ಪಂಚಾಯತ್ ಚುನಾವಣೆ, ಲೋಕಸಭಾ ಚುನಾವಣೆ, ಕೇರಳ ಹಾಗೂ ತಮಿಳುನಾಡು ಚುನಾವಣಾ ಕರ್ತವ್ಯ, ಮಧ್ಯಪ್ರದೇಶ ಚುನಾವಣಾ ಕರ್ತವ್ಯ, ಧರ್ಮಸ್ಥಳ ಮಹಾಮಸ್ತಕಾಭಿಷೇಶ ಕರ್ತವ್ಯ ನಿರ್ವಹಿಸಿರುತ್ತಾರೆ ಹಾಗೂ ಇತರೆ ಕಾನೂನು ಸುವ್ಯವಸ್ಥೆ ಕರ್ತವ್ಯ, ಟ್ರಾಫಿಕ್ ವಾರ್ಡನ್ ಮತ್ತು ಬಂದೋಬಸ್ತ್ ಕರ್ತವ್ಯಗಳನ್ನು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೂಡ ಕರ್ತವ್ಯವನ್ನು ನಿರ್ವಹಿಸಿರುತ್ತಾರೆ.





ಸಾಮಾಜಿಕ ಕಳಕಳಿ ಇರುವ ಇವರ ಸೇವಾಮನೋಭಾವ ಮತ್ತು ಪ್ರಾಮಾಣಿಕತೆಗೆ ಸಾರ್ವಜನಿಕರಿಂದಲೂ ಪ್ರಶಂಸನೆಯನ್ನು ಪಡೆದಿರುತ್ತಾರೆ ಅಲ್ಲದೇ, ಸಾಮಾಜಿಕ ಕಾರ್ಯಕ್ರಮಗಳಾದ ಸ್ವಚ್ಛತಾ ಅಭಿಯಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇಲ್ಲಿ ಶ್ರಮದಾನ, ಪರಿಸರ ಸಂರಕ್ಷಣೆ ಸಲುವಾಗಿ ಪ್ರತಿವರ್ಷ ಗಿಡನೆಡುವ ವನಮಹೋತ್ಸವ ಕಾರ್ಯಕ್ರಮಗಳನ್ನು ಕೂಡ ಪುತ್ತೂರು ಘಟಕದಲ್ಲಿ ನಡೆಸಿಕೊಂಡು ಬಂದಿರುತ್ತಾರೆ ಹಾಗೂ ಇವರು ಇತರ ಗೃಹರಕ್ಷಕರಿಗೆ ಮಾದರಿ ಎಂದೂ ಸಮಾದೇಷ್ಟರು ತಿಳಿಸಿರುತ್ತಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version