ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು ಇ .ಎಸ್ .ಐ.ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಕಾರ್ಮಿಕ ಸಚಿವರಿಗೆ ಮನವಿ ಸಂಸದ ನಳಿನ್ ಕುಮಾರ್ ಕಟೀಲ್Published
11 months agoon
By
Akkare Newsನವದೆಹಲಿಯಲ್ಲಿ ಇಂದು ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಬಿಜೆಪಿ ಅವರನ್ನು ಭೇಟಿಯಾಗಿ ನಮ್ಮ ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಮನವಿ ಸಲ್ಲಿಸಲಾಯಿತು.
ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಉನ್ನತೀಕರಣ, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರು ಹಾಗೂ ಇತರೆ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ ಸೇವೆಗಳು ಜಿಲ್ಲೆಯ ಶ್ರಮಿಕ ವರ್ಗಕ್ಕೆ ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು ಮಾಡಿದ ನಮ್ಮ ಮನವಿಗೆ ಸ್ಪಂದಿಸಿದ ಮಾನ್ಯ ಸಚಿವರು ಈ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆಯನ್ನೂ ನೀಡಿದ್ದಾರೆ.