Published
1 year agoon
By
Akkare Newsದಾವಣಗೆರೆ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತದ ಅಧ್ಯಕ್ಷರಾಗಿ ಭ್ರಷ್ಟಾಚಾರ ಆರೋಪ ಎದುರಿಸಿದ್ದ ಚನ್ನಗಿರಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.ಪಕ್ಷ ವಿರೋಧಿ ಚಟುವಟಿಕೆ ಮಾಡಿ 9 ತಿಂಗಳ ಹಿಂದೆ 6 ವರ್ಷ ಉಚ್ಚಟನೆಗೊಂಡ ಅವರ ಪುತ್ರ ಮಲ್ಲಿಕಾರ್ಜುನ ಕೂಡ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ
ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ನೇತೃತ್ವದ ಸಭೆಯಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಫೆ.7ರಂದು ಬೆಂಗಳೂರಿನಲ್ಲಿ ಪಕ್ಷ ಸೇರ್ಪಡೆಗೊಂಡರು.ವಿಧಾನ ಸಭಾ ಚುನಾವಣೆಗೆ ಕೆಲವೇ ತಿಂಗಳ ಹಿಂದೆ ಇವರ ತಂದೆ ಕೆಎಸ್ ಡಿಎಲ್ ಅಧ್ಯಕ್ಷ ವಿರೂಪಾಕ್ಷಪ್ಪ ನಡೆಸಿದ ಭ್ರಷ್ಟಾಚಾರ ದೇಶಾದ್ಯಂತ ಸದ್ದು ಮಾಡಿತ್ತು.