Published
11 months agoon
By
Akkare Newsಪುತ್ತೂರು: ಅರುಣ್ ಕುಮಾರ್ ಪುತ್ತಿಲ-ಬಿಜೆಪಿ ನಡುವಿನ ಮನಸ್ತಾಪ ಸುಖಾಂತ್ಯಗೊಂಡಿದೆ ಎನ್ನುವ ವಿಚಾರ ಬಲ್ಲಮೂಲಗಳಿಂದ ತಿಳಿದು ಬಂದಿದೆ.
ಮಂಗಳೂರಿನಲ್ಲಿ ಅಜ್ಞಾತ ಸ್ಥಳವೊಂದರಲ್ಲಿ ನಡೆದ ಸಭೆಯಲ್ಲಿ ಪಕ್ಷ ಸೇರ್ಪಡೆ ಕುರಿತು ಮುಖಂಡರ ಸಭೆ ನಡೆದಿದ್ದು, ಅರುಣ್ ಕುಮಾರ್ ಪುತ್ತಿಲ ಶೀಘ್ರ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂಬುದು ಚರ್ಚೆಯ ಪ್ರಮುಖ ಅಂಶವಾಗಿತ್ತು. ಆದರೆ ಪಕ್ಷ ಸೇರ್ಪಡೆಗೆ ಯಾವ ಹುದ್ದೆ ನೀಡುತ್ತಾರೆ ಎಂಬುದು ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.
ಇಲ್ಲಿತ ನಕ ನಡೆದಿರುವುದು ಇತಿಹಾಸ. ಮುಂದೆ ನಡೆಯುವುದೆಲ್ಲಾ ಹೊಸ ಅಧ್ಯಾಯ ಎಂದು ಸಭೆಯಲ್ಲಿ ಪುತ್ತಿಲ ಪರಿವಾರದ ಮುಖಂಡರು ಹೇಳಿದ್ದಾರೆ ಎಂದು ತಿಳಿದು ಬಂದಿದ್ದು, ಸದ್ಯದಲ್ಲೇ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದು ಪರಿವಾರ ಮುಖಂಡರು ಸಹಿತ ಬಿಜೆಪಿ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ವಿಚಾರ ಬಹಿರಂಗವಾಗಿದೆ.