Published
1 year agoon
By
Akkare Newsಮಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಮನೆಗೆ ಎನ್‌ಎಸ್‌ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆಯೊಂದು ನಡೆದಿದೆ.
ಉರ್ವಾದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿರುವ ನಳಿನ್ ಕುಮಾರ್ ಮನೆಗೆ ಮುತ್ತಿಗೆ ಹಾಕಲು ಯತ್ನ ನಡೆದಿದ್ದು, ಪೊಲೀಸರು ಎನ್‌ಎಸ್‌ಯುಐ ಕಾರ್ಯಕರ್ತರನ್ನು ತಡೆ ಹಿಡಿದಿದ್ದಾರೆ. ನಳಿನ್ ಕುಮಾರ್ ಕಟೀಲ್, ಬಿಜೆಪಿ, ಕೇಂದ್ರ ಸರಕಾರ ವಿರುದ್ಧ ಎನ್‌ಎಸ್‌ಯುಐ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ ಎಂದು ವಿರೋಧಿಸಿ ಘೋಷಣೆ ಕೂಗಿದ್ದಾರೆ.
ಪೊಲೀಸರು ತಡೆಹಿಡಿದರೂ ಎನ್‌ಎಸ್‌ಯುಐ ಕಾರ್ಯಕರ್ತರು ನುಗ್ಗಲು ಯತ್ನ ಮಾಡಿದ್ದು. ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.