ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ಪುತ್ತೂರಿನ ಯುವತಿಗೆ ಉದ್ಯೋಗದ ನೆಪದಲ್ಲಿ ಲಕ್ಷಾಂತರ ವಂಚನೆ ಸಂಪ್ಯ ಪೊಲೀಸರ ಕ್ರಿಪ್ತ ಕಾರ್ಯಚರಣೆ ಮೂವರು ಬಂಧನ ಜಿಲ್ಲೆಯಲ್ಲಿ ಪ್ರಥಮ ಸೈಬರ್ ಪ್ರಕರಣ

Published

on

ಪುತ್ತೂರು : ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ‌ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪಿ.ಎಸ್.ಐ. ಜಂಬೂರಾಜ್ ಬಿ. ಮಹಾಜನ್ ಅವರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರಬಾಯಿ ಸಿ.ಆರ್. (23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್ ಕುಮಾರ್ ನಾಯ್ಕ (19) ಎಂದು ಗುರುತಿಸಲಾಗಿದೆ.ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪತ್ರಿಕೆಯಲ್ಲಿ ಕರಾವಳಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಫೀಸ್ ಕೆಲಸ ಖಾಲಿ ಇದೆ. ನಿರುದ್ಯೋಗಿಗಳಿಗೆ ಬಂದ ದಿನವೇ ಕೆಲಸ ಸಿಗುತ್ತದೆ ಎಂಬುದಾಗಿ ಬಂದ ಜಾಹಿರಾತು ನೋಡಿ ಜಾಹಿರಾತಿನಲ್ಲಿ ನಮೂದಿಸಿದ ಫೋನ್ ನಂಬರ್ ಗೆ ಕರೆ ಮಾಡಿ ವಿಚಾರಿಸಿದಾಗ ಕರೆಯನ್ನು ಸ್ವೀಕರಿಸಿ ನೀವು ಕೆಲಸಕ್ಕೆ ಸೇರ ಬಯಸಿದರೆ ಫೀಸ್ ಕೊಡಬೇಕು ಎಂಬುದಾಗಿ ತಿಳಿಸಿ ಕಳೆದ ಸುಮಾರು 7 ತಿಂಗಳಿನಿಂದ ಪದೇ ಪದೇ ಆನ್ ಲೈನ್ ಮುಂಖಾಂತರ ಹಣವನ್ನು ಪಾವತಿ ಮಾಡುವಂತೆ ತಿಳಿಸಿದ್ದರು. ಅದರಂತೆ ಗೂಗಲ್ ಪೇ ಮುಖಾಂತರ ಇದುವರೆಗೆ ಸುಮಾರು ಒಟ್ಟು 2,25,001 ರೂ.ವನ್ನು ಆರೋಪಿಗಳ ಖಾತೆಗೆ ಪಾವತಿ ಮಾಡಿದ್ದರು. ಅದರೂ ಸಹ ಪದೇ ಪದೇ ಕರೆ ಮಾಡಿ ಇನ್ನು ಹಣವನ್ನು ನೀಡಬೇಕು ಎಂದು ಹೇಳಿ ಕೆಲಸ ಕೊಡುವುದಾಗಿ ನಂಬಿಸಿ ಯಾವುದೇ ಉದ್ಯೋಗ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ ರಿಷ್ಯಂತ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಂ.ಎನ್ ಮತ್ತು ರಾಜೇಂದ್ರ ಡಿ.ಎನ್. ಅವರ ನಿರ್ದೇಶನದಲ್ಲಿ, ಪುತ್ತೂರು ಪೊಲೀಸ್ ಉಪಾಧೀಕ್ಷಕ ಡಾ. ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ರವಿ ಬಿ.ಎಸ್ ಅವರ ಆದೇಶದಂತೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕ ಜಂಬುರಾಜ್ ಬಿ ಮಹಾಜನ್ ನೇತೃತ್ವದಲ್ಲಿ ಎಎಸ್‌ಐ ಶ್ರೀಧರ್ ರೈ, ಸಿಬ್ಬಂದಿಗಳಾದ ಮಧು ಕೆ.ಎನ್., ಸತೀಶ್ ಎನ್. ಗಿರೀಶ ಕೆ., ಶಿವಪುತ್ರಮ್ಮ, ಹೆಚ್.ಜಿ. ಹಕೀಂ ಮತ್ತು ಗಣಕ ಯಂತ್ರ ವಿಭಾಗದ ದಿವಾಕರ್, ಸಂಪತ್ ಕಾರ್ಯಾಚರಣೆ ನಡೆಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version