Published
1 year agoon
By
Akkare Newsಹೆಲ್ಮೆಟ್ ಕಡ್ಡಾಯ: ಆರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಬೆಂಗಳೂರು ಸಂಚಾರಿ ಪೊಲೀಸರು ಹೆಲ್ಮೆಟ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದಾರೆ. ಶಾಲೆಗೆಂದು ಮಕ್ಕಳನ್ನು ಬಿಡುವಾಗ ಪೋಷಕರು ಕಡ್ಡಾಯವಾಗಿ ಮಕ್ಕಳಿಗೆ ಹೆಲ್ಮೆಟ್ ಧರಿಸಬೇಕು ಎಂದು ಬೆಂಗಳೂರು ಸಂಚಾರಿ ಪೊಲೀಸರು ಹೇಳಿದ್ದಾರೆ.
ಹಾಗೆನೇ ತಮ್ಮ ಗಾಡಿಯಲ್ಲಿ ಮೂರಕ್ಕೂ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುವ ಪೋಷಕರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕೂಡಾ ಬೆಂಗಳೂರು ಸಂಚಾರಿ ಪೊಲೀಸರು ಸೂಚನೆ ನೀಡುರುವದಾಗಿ ವರದಿಯಾಗಿದೆ.
ಶಾಲಾ ಆಟೋ, ಖಾಸಗಿ ಕಾರು, TT ,ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುಗಿ ಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.