Published
11 months agoon
By
Akkare Newsಬೆಂಗಳೂರು : ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನವಾಗಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು ಮುಂದಾಗುತ್ತಿದ್ದು, ಅಪ್ಲೋಡ್ ಸಮಸ್ಯೆಯಾಗಲಿದೆ.ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಾರಿಗೆ ಇಲಾಖೆ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನೇಕ ಇಲಾಖೆಗಳನ್ನ ಸಿಎಂ ಸಭೆ ಕರೆದಿದ್ದರು. ಅದೇ ರೀತಿ ಸಾರಿಗೆ ಇಲಾಖೆಯವರು ಕೂಡ ಭಾಗಿಯಾಗಿದ್ದರು. ಆಟೋ ಟ್ಯಾಕ್ಸಿ, ಲಾರಿ ಅಸೋಷಿಯಷನ್ ಅವರು ಎಲ್ಲಾ ಬಂದಿದ್ದರು. ಅವರ ಬೇಡಿಕೆಗಳನ್ನ ಕೂಡ ಇಟ್ಟಿದ್ದಾರೆ. ಜೊತೆಗೆ, ನಮ್ಮ ಸರ್ಕಾರ ಬಂದಮೇಲೆ ಸಾಕಷ್ಟು ಬೇಡಿಕೆ ಈಡೇರಿಸಿದ್ದೇವೆ ಎಂದರು. ಇಂದು ಹೊಸ ಬೇಡಿಕೆಗಳನ್ನೂ ಸಹ ಇಟ್ಟಿದ್ದಾರೆ. ಮುಂದಿನದ್ದು ಬಜೆಟ್ ದಿನ ನೋಡೋಣ ಎಂದು ಹೇಳಿದ್ದೇವೆ ಎಂದು ಹೇಳಿದರು.
ಇನ್ನು ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಮಾಡಿಸಲು ಫೆ.17ನೇ ತಾರೀಕು ಲಾಸ್ಟ ಡೇಟ್ ಇದೆ. ಹಿಂದೆ ಒಂದು ಸರಿ ಮುಂದಕ್ಕೆ ಹಾಕಿದ್ದೆವು. ಈಗ ಮತ್ತೆ ಮುಂದಕ್ಕೆ ಹಾಕಿ ಅಂತಾ ಹೇಳ್ತ ಇದಾರೆ. ಇನ್ನು ಒಂದುವಾರ ಸಮಯ ಇದೆ. ಎಲ್ಲಾ ಕೊನೇನಲ್ಲಿ ಅರ್ಜಿ ಹಾಕೋಕೆ ಬರ್ತಾರೆ. ಒತ್ತಡ ಜಾಸ್ತಿ ಆಗಿ ಅಪ್ಲೋಡ್ ಆಗೋಲ್ಲ ಅದೊಂದು ಸಮಸ್ಯೆ ಇದೆ. ಇನ್ನು ಟೈಮ್ ಇದೆ ನೋಡೋಣ ಎಂದುಸಾರಿಗೆ ಸಚೊವ ರಾಮಲಿಂಗಾರೆಡ್ಡಿ ಅವರು ಬಿಗ್ ಅಪ್ಡೇಟ್ ನೀಡಿದರು.