Published
10 months agoon
By
Akkare Newsಬೆಂಗಳೂರು: ರಾಜ್ಯದಲ್ಲಿ 256 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭರ್ತಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ(ಕೆಪಿಎಸ್ಸಿ) ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ನೇಮಕಾತಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.
ಕುಣಿಗಲ್ ಶಾಸಕ ಡಾ.ರಂಗನಾಥ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಿಡಿಒ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಸಮಸ್ಯೆ ನಿವಾರಿಸಲು ಪ್ರಯತ್ನಿಸಲಾಗುವುದು. ಪಿಡಿಒಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಪಿಡಿಒಗಳನ್ನು ಬೇರೆಡೆ ನಿಯೋಜಿಸುವುದನ್ನು ಸಹ ರದ್ದುಪಡಿಸಲಾಗಿದೆ ಎಂಬುದನ್ನು ಸಚಿವರು ಸದನಕ್ಕೆ ತಿಳಿಸಿದರು.
ಪಿಡಿಒಗಳ ವರ್ಗಾವಣೆಯನ್ನು ಅತ್ಯಂತ ಖಾರದರ್ಶಕವಾಗಿ ಮಾಡುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದ್ದು ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆ ಮಾಡಲಾಗುವುದು ಎಂದರು.