ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಲೋಕಸಭಾ ಚುನಾವಣೆಗೆ ಪೂರ್ವ ತಯಾರಿ ಮಂಗಳೂರಿನಿಂದಲೇ ಚುನಾವಣೆಗೆ ರಣಕಹಳೆ ಮೊಲಗಿಸಿರುವ ಕೈ ಪಡೆ;ಇಂದು (ಫೆ.17) ಅಡ್ಯಾರ್ ಕಾಲೇಜ್ ಕ್ರೀಡಾಂಗಣದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ : ಕಾಂಗ್ರೆಸ್ಸಿನ ಘಟಾನುಘಟಿ ನಾಯಕರು ಭಾಗವಹಿಸುವ ನಿರೀಕ್ಷೆ, ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಬಿರುಸಿನ ತಯಾರಿ

Published

on

ಮಂಗಳೂರು: ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ. ಮಂಗಳೂರಿನ ಆಡ್ಯಾ‌ರ್ ನಲ್ಲಿರುವ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಸಮಾವೇಶ ಆಯೋಜಿಸಲಾಗಿದೆ.ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಎಐಸಿಸಿ ಸೂಚನೆ ಮೇರೆಗೆ ರಾಜ್ಯಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಎಲ್ಲಾ ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, ಲೋಕಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು, ಮುಂಚೂಣಿ ಘಟಕಗಳು, ಎಲ್ಲಾ ಹಂತದ ಅಧ್ಯಕ್ಷರು ಕಾರ್ಯಕರ್ತರ ಸಮಾವೇಶದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.





ಸಮಾವೇಶ ನಡೆಯುವ ಅಡ್ಯಾರ್ ಮೈದಾನದ ಬಳಿ ಟ್ರಾಫಿಕ್ ಬದಲಾವಣೆ
ಸಮಾವೇಶ ಹಿನ್ನಲೆ ಕಾರ್ಯಕ್ರಮ ನಡೆಯುವ ಅಡ್ಯಾ‌ರ್ ಮೈದಾನದ ಬಳಿ ಫೆ.17 ರ ಬೆಳಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಟ್ರಾಫಿಕ್ ಬದಲಾವಣೆ ಮಾಡಲಾಗಿದೆ. ಉಡುಪಿ ಕಡೆಯಿಂದ ಬೆಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ನಂತೂರು-ಪಂಪ್‌ವೆಲ್‌- ತೊಕ್ಕೊಟ್ಟು-ಡಿಪುಪು-ಮೆಲ್ಕಾರ್ ಮೂಲಕ ಸಂಚರಿಸುವುದು. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ಮೆಲ್ಲಾರ್-ಮುಡಿಪು-ತೊಕ್ಕೊಟ್ಟು-ಪಂಪ್‌ವೆಲ್‌ ಮೂಲಕ ಸಂಚರಿಸಬೇಕು.

ಬಂಟ್ವಾಳದಿಂದ ಬರುವ ಗಣ್ಯರ ಕಾರುಗಳು ಹಾಗೂ ಸಾರ್ವಜನಿಕರ ಮೋಟಾರು ಸೈಕಲ್‌ಗಳನ್ನು ಕಾಮತ್ ಮೈದಾನದಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. ಬಂಟ್ವಾಳದಿಂದ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ ಕಾರುಗಳನ್ನು ಅಡ್ಯಾರ್‌ನ ಕರ್ಮಾ‌ರ್ ಮೈದಾನದಲ್ಲಿ ಪಾರ್ಕಿಂಗ್. ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳು ಕಾರ್ಯಕರ್ತರನ್ನು ಕಾಮತ್ ಪಾರ್ಕಿಂಗ್ ಬಳಿ ಇಳಿಸಿ ಮೋತಿಶ್ಯಾಮ್/ಷಾ ಮೈದಾನದಲ್ಲಿ ಪಾರ್ಕಿಂಗ್. ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಗಣ್ಯರ ಕಾರುಗಳನ್ನು ಅಡ್ಯಾರ್ ಗಾರ್ಡನ್ನಲ್ಲಿ ಪಾರ್ಕಿಂಗ್. ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳು ಷಾ ಮೈದಾನದಲ್ಲಿ ಪಾರ್ಕಿಂಗ್ ಮತ್ತು ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಮೋಟಾರ್ ಸೈಕಲ್‌ಗಳನ್ನು ಅಡ್ಯಾ‌ರ್ ಗಾರ್ಡನ್ ಮೈದಾನದಲ್ಲಿ ಪಾರ್ಕಿಂಗ್ ಹಾಗೂ ಅಡ್ಯಾರ್ ಕಟ್ಟೆಯಲ್ಲಿರುವ ಜಯಶೀಲ ರವರ ಮೈದಾನದಲ್ಲಿ ಕೂಡಾ ಪಾರ್ಕಿಂಗ್ ಮಾಡಲು ಸೂಚಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version