ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೊದಲ ಮೈತ್ರಿಯ ಚುನಾವಣೆ , ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ

Published

on

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್​ ವಿರುದ್ಧ 1506 ಮತಗಳ ಅಂತರದಲ್ಲಿ ಪುಟ್ಟಣ್ಣ ಜಯ ಗಳಿಸಿದ್ದಾರೆ ಎಂದು ತಿಳಿದು ಬಂದಿದೆ.






ಈ ಹಿಂದೆ ಇದೇ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದ ಪುಟ್ಟಣ್ಣ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು 2023ರ ಮಾರ್ಚ್‌ನಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದರು. ಅಂದಿನಿಂದ ಖಾಲಿ ಉಳಿದಿದ್ದ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. 2026 ನವೆಂಬರ್ 11ರವರೆಗೆ ಈ ಸ್ಥಾನದ ಕಾಲಾವಧಿಯಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement