Published
2 years agoon
By
Akkare News
ಪುತ್ತೂರು: ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಕಲ್ಲರ್ಪೆ ಬಳಿ ನಡೆದಿದೆ.ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.







ಗಾಯಗೊಂಡ ಸವಾರನನ್ನು ಮುಕ್ವೆ ಸಮೀಪದ ಸಫ್ಘಾನ್ ಎನ್ನಲಾಗಿದೆ. ಅಪಘಾತದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ ಎಂದು ತಿಳಿದು ಬಂದಿದೆ.