ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಿಂದ ಗೋ ಕಳವು ತನಿಖೆ ನಡೆಸಿ, ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ; ವಿ.ಹಿಂ.ಪ. ಬಜರಂಗದಳದಿಂದ ಮನವಿ

Published

on

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಿಂದ ದನ ಕಳ್ಳತನ ಬಗ್ಗೆ ತನಿಖೆ ನಡೆಸಿ,ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆ ಹಾಗೂ ವಠಾರದಲ್ಲಿ ಒಂದು ವಾರದಿಂದ ಗೋ ಕಳ್ಳತನವಾಗುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು ದೇವಳದ ಭದ್ರತಾ ಸಿಬ್ಬಂದಿಗಳಿಗೆ ಮಾಹಿತಿ ಇದ್ದರೂ ಯಾವುದೇ ದೂರು ದಾಖಲಿಸದೆ ಇರುವುದರಿಂದ ಮುಂದಿನ ದಿನಗಳಲ್ಲಿ ಇಂತಹ ಗೋಕಳ್ಳತನ ನಡೆಯುವ ಸಾಧ್ಯತೆ ಇದ್ದುಪೊಲೀಸ್ ಇಲಾಖೆಗೆ ದೂರು ನಲ್ಲಿಸಿ ಇಲಾಖಾ ತನಿಖೆ ನಡೆಸಿ ಇಂತಹ ಕೃತ್ಯಗಳನ್ನು ತಡೆಯುವಂತೆ ಹಾಗೂ ಭದ್ರತಾ ಸಿಬ್ಬಂದಿಗಳಿಗೆ ಸರಿಯಾದ ಎಚ್ಚರಿಕೆಯಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಬೇಕಾಗಿ ಮನವಿಯಲ್ಲಿ ತಿಳಿಸಿದ್ದಾರೆ.






ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಕಾರ್ಯದರ್ಶಿ ಜಿತೇಶ್ ಬಲ್ನಾಡ್, ಬಜರಂಗದಳ ಪುತ್ತೂರು ನಗರ ಪ್ರಖಂಡ ಸಂಯೋಜಕರಾದ ಜಯಂತ್ ಕುಂಜೂರುಪಂಜ, ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ಸಂಯೋಜಕರಾದ ವಿಶಾಕ್ ಸಸಿಹಿತ್ತು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement