Published
10 months agoon
By
Akkare Newsಮಂಗಳೂರು: ತಿರುವನಂತಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ರವರ ಮನವಿಯ ಮೇರೆಗೆ ಮಂಗಳೂರಿಗೂ ವಿಸ್ತರಣೆ ಮಾಡಲಾಗಿದೆ.
ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ತಿರುವನಂತಪುರ-ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ.
ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರವನ್ನು ಹೊರತು ಪಡಿಸಿ ವಾರದ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ.
ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ನಳೀನ್ ಕುಮಾರ್ ಕಟೀಲ್ ರವರು ಕೃತಜ್ಞತೆ ಸಲ್ಲಿಸಿದ್ದಾರೆ.