ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಂತರರಾಷ್ಟ್ರೀಯ

ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತ್ಯು.

Published

on

ಮಂಗಳೂರು : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ.ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

2019ರಲ್ಲಿ ದುಬೈಗೆ ತೆರಳಿ ಎಕ್‌ಸ್‌ ಕ್ಯೂಜೆಟ್‌ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‌ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.






ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದೆಸೆಯಲ್ಲೇ ರೋಟರ್ಯಾಕ್ಟ್ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.ದುಬೈಯಲ್ಲಿ ವಾಹನ ಚಾಲನಾ ಲೈಸೆನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬೈಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement