ಅಪಘಾತ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ಮಂಗಳೂರು ಮಾಹಿತಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು: ಮುರದಲ್ಲಿ ಟಿಪ್ಪರ್ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು, ಇನ್ನೋರ್ವನ ಚಿಂತಾಜನಕ....!!! ಟಿಪ್ಪರ್ ಲಾರಿಗಳ ರಬಸಕ್ಕೆ ಕಡಿವಾಣ ಹಾಕಲು ಸಂಬಂಧಪಟ್ಟ ಇಲಾಖೆಗೆ ಸಾರ್ವಜನಿಕರ ಒತ್ತಾಯPublished
10 months agoon
By
Akkare Newsಪುತ್ತೂರು: ನಗರದ ಮುರದಲ್ಲಿ ಇದೀಗ ಎಂಪಿಎಂ ಸ್ಕೂಲ್ ಬಳಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಒರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.
ಸ್ಕೂಟರ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಒರ್ವ ಇದೀಗ ಮೃತಪಟ್ಟ ಬಗ್ಗೆ ವರದಿ ಬರುತ್ತಿದೆ.
ಸ್ಕೂಟರ್ ಪುತ್ತೂರಿನಿಂದ ಕಬಕ ಕಡೆಗೆ ಚಲಿಸುತ್ತಿದ್ದ ವೇಳೆ ಕಬಕದಿಂದ ಪುತ್ತೂರ ಕಡೆ ಬರುತ್ತಿದ್ದ ಟಿಪ್ಪರ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.