Published
10 months agoon
By
Akkare Newsಬಂಟ್ವಾಳ : ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.ಆಲಡ್ಕ ನಿವಾಸಿ ಆಶ್ರಫ್ (32) ಮೃತ ಯುವಕ.ಆಲಡ್ಕ ನಿವಾಸಿ ತನ್ವೀರ್ ಆಶ್ರಫ್ ಅವರ ಸ್ನೇಹಿತರಾಗಿದ್ದು, ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಸ್ನೇಹಿತನಿಗೆ ಡ್ರಾಫ್ ಕೊಡುವ ಉದ್ದೇಶದಿಂದ ತನ್ನ ಸ್ಕೂಟರ್ ನಲ್ಲಿ ಬಿಸಿರೋಡಿಗೆ ತೆರಳಿದ್ದರು.
ಬೆಳಿಗ್ಗೆ ಅಶ್ರಫ್ ಅವರು ಕೈಕಂಬದಲ್ಲಿರುವ ತರಕಾರಿ ಅಂಗಡಿಗೆ ಇನ್ನೇನು ಸ್ನೇಹಿತ ತನ್ವೀರ್ ನ್ನು ಇಳಿಸಬೇಕು ಎನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಖಾಲಿ ಮಾಡಿ ವಾಪಾಸು ಹೋಗುವ ಲಾರಿಯ ಚಾಲಕ ಲಾರಿಯನ್ನು ಅಜಾಗರೂಕತೆಯಿಂದ ಹಿಂಬದಿಗೆ ಚಲಿಸಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಗಂಭೀರವಾಗಿ ಗಾಯಗೊಂಡ ಅಶ್ರಫ್ ನನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.