ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಲಾಖಾ ಮಾಹಿತಿ

ಬಂಟ್ವಾಳ : ಅಕ್ರಮ ಮರಳು ಸಾಗಾಟ ಪತ್ತೆ – ಮರಳು ಸಹಿತ ಟಿಪ್ಪ‌ರ್ ವಶಕ್ಕೆ; ಪ್ರಕರಣ ದಾಖಲು

Published

on

ಬಂಟ್ವಾಳ : ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಾರಿ ಚಾಲಕರು ಹಾಗೂ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ ನಡೆದಿದೆ.

ಮರಳು ಕಳವು ಹಾಗೂ ಅಕ್ರಮ ಸಾಗಾಟದ ಆರೋಪಿಗಳನ್ನು ಟಿಪ್ಪರ್ ಚಾಲಕ ಕಂ ಮಾಲಕ ತೆಂಕಕಜೆಕಾರು ಗ್ರಾಮ, ಬಂಟ್ವಾಳ ನಿವಾಸಿ ಮಿಥುನ್, ಟಿಪ್ಪರ್ ಮಾಲಕರಾದ ಅನಿಶ್ ಹಾಗೂ ಪ್ರಜ್ವಲ್ ಶೆಟ್ಟಿ ಎಂದು ಹೆಸರಿಸಲಾಗಿದೆ.






ಶನಿವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ ಬಿ ಅವರ ನೇತೃತ್ವದ ಪೊಲೀಸರು ಎರಡು ಟಿಪ್ಪರ್ ಲಾರಿಗಳನ್ನು ತಡೆದು ತಪಾಸಣೆ ನಡೆಸಿದಾಗ ಈ ಮರಳು ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮರಳನ್ನು ಅರ್ಕುಳ ಗ್ರಾಮದ ವಳಚ್ಚಿಲ್ ಎಂಬಲ್ಲಿನ ನೇತ್ರಾವತಿ ಹೊಳೆಯಿಂದ ಕಳವು ಮಾಡಿ ಅಕ್ರಮ ಸಾಗಾಟ ಮಾಡುವ ಬಗ್ಗೆ ಚಾಲಕ-ಮಾಲಕರು ಒಪ್ಪಿಕೊಂಡಿದ್ದು, ಮರಳು ಸಹಿತ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ: 26/2024 ಕಲಂ 379 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement