ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
10 months agoon
By
Akkare Newsಬೆಂಗಳೂರು: ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾಗಿದ್ದ ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ, ಚಿಕಿತ್ಸೆ ಫಲಿಸದೆ, ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೋದಿ ರಸ್ತೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಮು, 1985ರಲ್ಲಿ ಕೆಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ, ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯೂ ಆಗಿದ್ದರು. ಆ ಮೂಲಕ, ಕನ್ನಡದಲ್ಲಿ ಐಎಎಸ್ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರು.
ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.1993ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಮು ಅವರು, ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು.
2013ರಲ್ಲಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್ ಸೇರಿ, ರಾಜಕೀಯ ಆರಂಭಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲುಂಡಿದ್ದರು. ಬಳಿಕ, ಕಾಂಗ್ರೆಸ್ ತೊರೆದು, ಬಿಜೆಪಿ ಸೇರಿದ್ದರು. ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.