Published
10 months agoon
By
Akkare Newsಪುತ್ತೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಸೂಚನೆಯಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಈ ಬಾರಿಯೂ ಸ್ಪರ್ಧಿಸಲಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಪುತ್ತೂರು ಸಹಿತ ಜಿಲ್ಲೆಯಾದ್ಯಂತ ನಮ್ಮ ಪರಿವಾರ ಕೆಲಸ ಮಾಡುತ್ತಿದೆ. ರಾಜ್ಯಾದ್ಯಂತ ಪುತ್ತಿಲ ಪರಿವಾರ ವಿಸ್ತರಿಸಲಿದ್ದೇವೆ ಎಂದರು.
ಕೊಟೇಚಾದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ, ಮುಂದಿನ ಎಲ್ಲಾ ಚುನಾವಣೆಯಲ್ಲಿ ನಮ್ಮ ಸ್ಪರ್ಧೆ ಖಚಿತ, ಮುಂದಿನ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ. ಕಾರ್ಯಕರ್ತರ ರಕ್ಷಣೆ ನಮ್ಮ ಹೊಣೆ ಎಂದರು.ಪುತ್ತಿಲ ಪರಿವಾರದ ವಕ್ತಾರರಾದ ಶ್ರೀಕೃಷ್ಣ ಉಪಾಧ್ಯಾಯ, ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ಉಪಾಧ್ಯಕ್ಷರಾದ ಮಹೇಂದ್ರ ವರ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.