Published
10 months agoon
By
Akkare Newsಮಂಗಳೂರು :ಉದಯವಾಣಿ ದಿನ ಪತ್ರಿಕೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಮಂಗಳೂರು ನಿವಾಸಿ ಮನೋಹರ್ ಪ್ರಸಾದ್(65) ಮಾ. 1 ರಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಅಲ್ಪಕಾಲದ ಅಸ್ವಸ್ತತೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಮಂಗಳಾ ಆಸ್ಪತ್ರೆಗೆ ದಾಖಲಿಸಿಲಾಗಿತ್ತು, ಅಲ್ಲಿ ಅವರು ಇಂದು ಮುಂಜಾನೆ ನಿಧನ ಹೊಂದಿದರು.ಉದಯವಾಣಿ ದಿನ ಪತ್ರಿಕೆಯಲಿ ಸುಧೀರ್ಘವಾದ ಸೇವೆ ಸಲ್ಲಿಸಿದ್ದ ಮನೋಹರ್ ಪ್ರಸಾದ್ ದ.ಕ ಜಿಲ್ಲೆಯ ರಾಜಕೀಯ,ಸಾಂಸ್ಕೃತಿಕ ಸೇರಿದಂತೆ ಎಲ್ಲಾ ವಿಭಾಗದಲ್ಲೂ ಅಪೂರ್ವ ಜ್ಞಾನ ಹೊಂದಿದ್ದರು. 3 ದಶಕಗಳ ಕಾಲ ಉದಯವಾಣಿ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದ ಅವರು ಕೆಲ ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ನಿವೃತ್ತಿ ಹೊಂದುವಾಗ ಉದಯವಾಣಿಯ ಮಂಗಳೂರು ಸುದ್ದಿ ವಿಭಾಗದ ಮುಖ್ಯಸ್ಥರಾಗಿದ್ದರು.
ನಿವೃತ್ತಿಯ ಬಳಿಕವು ಅನಾರೋಗ್ಯದ ನಡುವೆಯೂ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಮನೋಹರ್ ಪ್ರಸಾದ್ ಭಾಗವಹಿಸುತ್ತಿದ್ದರು. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳದವರಾದರೂ ಮಂಗಳೂರಿನಲ್ಲಿ ಪತ್ರಕರ್ತರಾಗಿ ಪ್ರಸಿದ್ದಿ ಪಡೆದಿದ್ದರು.ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
ಪ್ರಶಸ್ತಿ ಪುರಸ್ಕರ
ಕರ್ನಾಟಕ ಕರಾವಳಿ ಇತಿಹಾಸದ ಕುರಿತು 608 ಸಂಶೋಧನ ಲೇಖನಗಳನ್ನು ಬರೆದಿದ್ದ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ರಾಜ್ಯ ಪ್ರಶಸ್ತಿ ಕೆನರಾ ಬ್ಯಾಂಕ್ ಅಮೃತೋತ್ಸವ ಪುರಸ್ಕಾರ ಮೊದಲಾದ ಹಲವು ಗೌರವ ಗಳಿಗೆ ಭಾಜನರಾಗಿದ್ದಾರೆ