ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಬೆಂಗಳೂರಿನ ಇಂದಿರಾ ನಗರದಲ್ಲಿರುವ ಖ್ಯಾತ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ;ಸ್ಫೋಟದಲ್ಲಿ ಐವರು ಸಿಬ್ಬಂದಿ ಗಾಯಗೊಂಡಿರುವ ಮಾಹಿತಿ ಲಭ್ಯ.

Published

on

ಬೆಂಗಳೂರಿನ ಇಂದಿರಾ ನಗರದಲ್ಲಿರುವ ಖ್ಯಾತ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಐವರು ಸಿಬ್ಬಂದಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ಹೆಚ್‌ಎಎಲ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು, ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.






ಕೆಫೆಯಲ್ಲಿ ಸಿಲಿಂಡ‌ರ್ ಸ್ಫೋಟವಾಗಿದೆ ಎಂದು ಹೇಳಲಾಗುತ್ತಿದ್ದು, ಆದರೆ ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ರಾಮೇಶ್ವರಂ ಕೆಫೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.ಮಧ್ಯಾಹ್ನ ಊಟದ ಸಮಯ ಅಲ್ಲಿ ಸ್ವಲ್ಪ ಜನಸಂದಣಿ ಇತ್ತು. ಸ್ಫೋಟದ ಸದ್ದು ಕೇಳಿ ಒಂದು ಕ್ಷಣ ಭಯವಾಯ್ತು ಹೋಟೆಲ್ ನಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿ ಆದವು. ರಾಮೇಶ್ವರಂ ಕೆಫೆ ಪಕ್ಕದಲ್ಲಿಯೇ ಅಪಾರ್ಟ್‌ಮೆಂಟ್ ಗಳಿವೆ. ಆದರೆ ಯಾವುದೇ ದೊಡ್ಡ ಅನಾಹುತ ಆಗಿಲ್ಲ ಎಂದು ಮೋಹನ್ ಎಂಬವರು ಹೇಳಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement