Published
10 months agoon
By
Akkare Newsಮಂಗಳೂರು: ಫೆ.2:ಗ್ರಾಮ ಸ್ವರಾಜ್ ಪ್ರತಿಷ್ಠಾನ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರ ಮುಂದಾಳತ್ವದದಲ್ಲಿ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ಸಿಬ್ಬಂದಿಯ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಭ್ರಮ ‘ಹೊಂಬೆಳಕು’ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ .ಮಳವಳ್ಳಿ ಶಾಸಕರಾದ ನರೇಂದ್ರ ಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಹರೀಶ್‌ಕುಮಾರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬೆಳಪು ಪಂಚಾಯಿತಿ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಮುನಿಯಾಲ್ ಉದಯಕುಮಾರ್ ಶೆಟ್ಟಿ,ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಎಂ.ಎಸ್.ಮಹಮ್ಮದ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ ಮೊದಲಾದವರ ಇದ್ದರು.