Published
2 years agoon
By
Akkare News
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತ ಬಾಂಬರ್ನ ಫೋಟೋ ಲಭ್ಯವಾಗಿದೆ.ಶಂಕಿತ ಬಾಂಬರ್ ಮುಖಕ್ಕೆ ಮಾಸ್ಕ್ ಕಣ್ಣಿಗೆ ಕೂಲಿಂಗ್ ಗ್ಲಾಸ್, ವೈಟ್ ಕ್ಯಾಪ್ ಧರಿಸಿ ಬಲಭುಜದ ಹಿಂಬದಿಗೆ ಕಪ್ಪು ಬಣ್ಣದ ಬ್ಯಾಗ್ ಹಾಕಿಕೊಂಡು ರಾಮೇಶ್ವರಂ ಕೆಫೆಗೆ ಎಂಟ್ರಿ ಕೊಡುತ್ತಿರುವುದನ್ನು ಲಭ್ಯವಾಗಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಘಟನೆ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಕಾನೂನು ಬಾಹಿರ ಚಟುವಟಿಕೆ ಕಾಯ್ದೆ (UAPA) ಮತ್ತು ಸ್ಪೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟೋಕನ್ ತೆಗೆದುಕೊಂಡ ಶಂಕಿತ ರವೆ ಇಡ್ಲಿ ತಿಂದು ಹ್ಯಾಂಡ್ ವಾಶಿಂಗ್ಗೆ ಹೋಗಿದ್ದಾನೆ. ಹ್ಯಾಂಡ್ ವಾಶ್ ಮಾಡಿ ಬ್ಯಾಗ್ ಅಲ್ಲೇ ಇಟ್ಟು ಬೈಕ್ನಲ್ಲಿ ತೆರಳಿದ್ದಾನೆ. ಆತ ಹೋದ ಸುಮಾರು ಒಂದು ಗಂಟೆಯ ಬಳಿಕ ಬಾಂಬ್ ಸ್ಫೋಟವಾಗಿದೆ. ಹೋಗುತ್ತಾ ವಾಚ್ ನಲ್ಲಿ ಟೈಂ ನೋಡಿ ಹೋಗಿದ್ದು ಕೆಫೆಯಿಂದ ಹೊರಗೆ ಬಂದು ಎಡಭಾಗಕ್ಕೆ ಹೋಗಿದ್ದಾನೆ. ಶಂಕಿತ ಆರೋಪಿಯ ಚಲನವಲನ ಸೆರೆಯಾಗಿರುವ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ.
ಶಂಕಿತ ಬಾಂಬರ್ಗಾಗಿ ತೀವ್ರ ಹುಡುಕಾಟ ನಡೆಸುತ್ತಿರುವ ಪೊಲೀಸರು ಆತನನ್ನು ಪತ್ತೆ ಹಚ್ಚಲು ಎಂಟು ತಂಡಗಳನ್ನು ರಚಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದಿರು ಗುಪ್ತಚರ ಇಲಾಖೆಯ ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ.