Published
10 months agoon
By
Akkare Newsಕಡಬ: ಬೈಕ್- ಮಿನಿಗೂಡ್ಸ್ ವಾಹನ ನಡುವೆ ಡಿಕ್ಕಿ| ಕಾಲೇಜು ವಿದ್ಯಾರ್ಥಿ ದುರ್ಮರಣ ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (20) ಎಂದು ಗುರುತಿಸಲಾಗಿದೆ.
ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್‌ರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ.